ನೆದರ್ಲೆಂಡ್ ವಿರುದ್ಧ ಬಾಂಗ್ಲಾದೇಶಕ್ಕೆ ಜಯ (ಚಿತ್ರಕೃಪೆ: ಕ್ರಿಕ್ ಇನ್ಫೋ) 
ಕ್ರಿಕೆಟ್

ಐಸಿಸಿ ಟಿ20 ವಿಶ್ವಕಪ್: ನೆದರ್ಲೆಂಡ್ ವಿರುದ್ಧ ಬಾಂಗ್ಲಾದೇಶಕ್ಕೆ 8 ರನ್ ಗಳ ರೋಚಕ ಜಯ

ಐಸಿಸಿ ಟಿ20 ವಿಶ್ವಕಪ್ ಸರಣಿಯ ಅರ್ಹತಾ ಸುತ್ತಿನ ಪಂದ್ಯದಲ್ಲಿ ನೆದರ್ಲೆಂಡ್ ವಿರುದ್ಧ ಬಾಂಗ್ಲಾದೇಶ 8 ರನ್ ಗಳ ರೋಚಕ ಜಯ ಸಾಧಿಸಿದೆ...

ಧರ್ಮಶಾಲಾ: ಐಸಿಸಿ ಟಿ20 ವಿಶ್ವಕಪ್ ಸರಣಿಯ ಅರ್ಹತಾ ಸುತ್ತಿನ ಪಂದ್ಯದಲ್ಲಿ ನೆದರ್ಲೆಂಡ್ ವಿರುದ್ಧ ಬಾಂಗ್ಲಾದೇಶ 8 ರನ್ ಗಳ ರೋಚಕ ಜಯ ಸಾಧಿಸಿದೆ.

ಬುಧವಾರ ಧರ್ಮಶಾಲಾದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾದೇಶ ನಿಗದಿತ 20 ಓವರ್ ಗಳಲ್ಲಿ ತಮೀಮ್ ಇಕ್ಬಾಲ್ ಅವರ ಅಮೋಘ ಅರ್ಧ ಶತಕ (83 ರನ್)ದ  ನೆರವಿನಿಂದ 7 ವಿಕೆಟ್ ನಷ್ಟಕ್ಕೆ 153 ರನ್ ಗಳಿಸಿತು. ಈ ಮೊತ್ತವನ್ನು ಬೆನ್ನುಹತ್ತಿದ ನೆದರ್ಲೆಂಡ್ ಕೂಡ ಮೈಬರ್ಘ್ (29ರನ್), ಕೂಪರ್ (20ರನ್) ಮತ್ತು ಬೊರ್ರೆನ್ (30ರನ್) ಅವರ ಬ್ಯಾಟಿಂಗ್  ಸಹಾಯದಿಂದ ಉತ್ತಮ ಹೋರಾಟ ನೀಡಿತಾದರೂ ಅಂತಿಮ ಓವರ್ ನಲ್ಲಿ ನಿಗದಿತ ಗುರಿ ತಲುಪಲಾಗದೇ ಕೇವಲ 8 ರನ್ ಗಳ ಅಂತರದಿಂದ ಸೋಲೊಪ್ಪಿಕೊಂಡಿತು. ಬಾಂಗ್ಲಾ ಪರ ಅಮೀನ್  ಹುಸ್ಸೇನ್ ಮತ್ತು ಶಕೀಬ್ ಅಲ್ ಹಸನ್ ತಲಾ 2 ವಿಕೆಟ್ ಕಬಳಿಸಿದರೆ, ನಾಯಕ ಮೋರ್ತಾಜಾ ಮತ್ತು ನಾಸಿರ್ ಹುಸೇನ್ ತಲಾ 1 ವಿಕೆಟ್ ಗಳಿಸಿದರು.

ಬಾಂಗ್ಲಾಪರ ಉತ್ತಮ ಬ್ಯಾಟಿಂಗ್ ಮಾಡಿ ಸವಾಲಿನ ಮೊತ್ತಕ್ಕೆ ಕಾರಣರಾದ ತಮೀಮ್ ಇಕ್ಬಾಲ್ ಅರ್ಹವಾಗಿಯೇ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

Sting operation ಮೂಲಕ ನಿಮ್ಮನ್ನು ಸಿಲುಕಿಸಲು ಯತ್ನಿಸಿರುವುದು ನಿಜವೇ ಆಗಿದ್ದರೆ ತನಿಖೆಗೆ ಆದೇಶಿಸಿ: ಸಿಎಂ ಡಿಕೆ.ಶಿವಕುಮಾರ್'ಗೆ HDK ಸವಾಲು

ಮತ ಕಳ್ಳತನದಿಂದಲೇ ಮೋದಿ ಪ್ರಧಾನಿಯಾಗಿದ್ದು, ಗೆಲ್ಲಲಾಗದ ರಾಜ್ಯಗಳಲ್ಲೂ BJP ಗೆಲುವು: ಅಭಿಜೀತ್ ದೀಪ್ಕೆ

ರಾಜ್ಯದ ಬಾಕಿ ಹಣದ ಬಗ್ಗೆ ನಿರ್ಮಲಾ ಸೀತಾರಾಮನ್ ಜೊತೆ ಚರ್ಚೆ: GST ಮಂಡಳಿ ಸಭೆ ಬಳಿಕ CM ಡಿಕೆ.ಶಿವಕುಮಾರ್ ಹರ್ಷ

ಉತ್ತರ ಭಾರತ ವ್ಯಕ್ತಿಯಿಂದ ಡಿಕೆಶಿ ಸಿಲುಕಿಸಲು ಯತ್ನ: ಸಚಿವ ಸತೀಶ್ ಜಾರಕಿಹೊಳಿ