ಆಸ್ಟ್ರೇಲಿಯಾದ ಲ್ಯಾನ್ನಿಂಗ್ ಅವರ ಬ್ಯಾಟಿಂಗ್ ವೈಖರಿ (ಚಿತ್ರಕೃಪೆ: ಕ್ರಿಕ್ ಇನ್ಫೋ) 
ಕ್ರಿಕೆಟ್

ದ.ಆಫ್ರಿಕಾ ವಿರುದ್ಧ ಆಸ್ಟ್ರೇಲಿಯಾ ವನಿತೆಯರಿಗೆ ಜಯ

ಐಸಿಸಿ ಮಹಿಳಾ ಟಿ20 ವಿಶ್ವಕಪ್ ನಲ್ಲಿ ಶುಕ್ರವಾರ ಆಸ್ಟ್ರೇಲಿಯಾ ಮಹಿಳಾ ತಂಡ ದಕ್ಷಿಣ ಆಫ್ರಿಕಾ ಮಹಿಳಾ ತಂಡದ ವಿರುದ್ಧ 6 ವಿಕೆಟ್..

ನಾಗ್ಪುರ: ಐಸಿಸಿ ಮಹಿಳಾ ಟಿ20 ವಿಶ್ವಕಪ್ ನಲ್ಲಿ ಶುಕ್ರವಾರ ಆಸ್ಟ್ರೇಲಿಯಾ ಮಹಿಳಾ ತಂಡ ದಕ್ಷಿಣ ಆಫ್ರಿಕಾ ಮಹಿಳಾ ತಂಡದ ವಿರುದ್ಧ 6 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

ನಾಗ್ಪುರದಲ್ಲಿ ನಡೆದ ಮಹಿಳಾ ವಿಭಾಗದ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ತಂಡ 6ವಿಕೆಟ್‌ಗಳಿಂದ ದಕ್ಷಿಣ ಆಫ್ರಿಕಾ ತಂಡವನ್ನು ಮಣಿಸಿತು. ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ  ದಕ್ಷಿಣ ಆಫ್ರಿಕಾ ತಂಡ ನಿಗದಿತ 20 ಓವರ್ ಗಳಲ್ಲಿ ವ್ಯಾನ್ ನೀಕೆರ್ಕ್ (45 ರನ್) ಮತ್ತು ಚೆಟ್ಟಿ (34 ರನ್) ಅವರ ಸಮಯೋಚಿತ ಬ್ಯಾಟಿಂಗ್ ನೆರವಿನಿಂದ  6ವಿಕೆಟ್‌ಗೆ 102ರನ್ ಪೇರಿಸಿತು.

ಆಸ್ಟ್ರೇಲಿಯಾ ಪರ ಚೀಟ್ಲ್ ಮತ್ತು ಪೆರ್ರಿ ತಲಾ 2 ವಿಕೆಟ್ ಪಡೆದರೆ, ಬೀಮ್ಸ್ 1 ವಿಕೆಟ್ ಕಬಳಿಸಿದರು. ದಕ್ಷಿಣ ಆಫ್ರಿಕಾ ನೀಡಿದ 103 ರನ್ ಗಳ ಸವಾಲನ್ನು ಬೆನ್ನುಹತ್ತಿದ ಆಸ್ಟ್ರೇಲಿಯಾ ತಂಡ  ಬ್ಲ್ಯಾಕ್ ವೆಲ್ (42 ರನ್ ) ಮತ್ತು ಲ್ಯಾನ್ನಿಂಗ್ (30 ರನ್) ಅವರ ನೆರವಿನಿಂದ 18.3 ಓವರ್‌ಗಳಲ್ಲಿ 4 ವಿಕೆಟ್‌ಗೆ 105ರನ್ ಗಳಿಸಿ ಗೆಲುವಿನ ನಗೆ ಬೀರಿತು.

ಆಲ್ ರೌಂಡ್ ಪ್ರದರ್ಶನ ನೀಡಿದ ಲ್ಯಾನ್ನಿಂಗ್ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪೇಪರ್ ಲೀಕ್,'ಚಂದಾ ಚೋರಿ' ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ; 'ವಂದೇ ಮಾತರಂ'ನ ಎರಡು ಪ್ಯಾರಾ ಮಾತ್ರ ಹಾಡಲು ನಿರ್ಣಯ!

illegal gold mine: ಮಧ್ಯ ಆಫ್ರಿಕಾದಲ್ಲಿ ಭಯಾನಕ ದುರಂತ, ಚಿನ್ನದ ಗಣಿಯಲ್ಲಿ ಕುಸಿತ,100 ಮಂದಿ ದುರ್ಮರಣ! Video

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ರೋಚಕ ಪಂದ್ಯದಲ್ಲಿ ಭಾರತ 5-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿ ವಿಶ್ವಕಪ್‌ನಿಂದ ಹೊರದೂಡಿದೆ!

ಬಾಲಿವುಡ್ ನಟ ಗೋವಿಂದಾ ದಾಂಪತ್ಯ ಕಿತ್ತಾಟದಲ್ಲಿ ಸ್ಫೋಟಕ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ ಸುನೀತಾ ಅಹುಜಾ!