ಮೊಹಾಲಿ: ಐಸಿಸಿ ಟಿ20 ವಿಶ್ವಕಪ್ ಪಂದ್ಯಾವಳಿಯ ಬಳಿಕ ಚುಟುಕು ಕ್ರಿಕೆಟ್ ಮಾದರಿಗೆ ವಿದಾಯ ಘೋಷಿಸುವುದಾಗಿ ಪಾಕಿಸ್ತಾನ ತಂಡದ ನಾಯಕ ಶಾಹಿದ್ ಅಫ್ರಿದಿ ಸ್ಪಷ್ಟಪಡಿಸಿದ್ದಾರೆ.
ಟಿ20 ಪಂದ್ಯವಾಳಿಯ ಟೀಂ ಇಂಡಿಯಾ ಹಾಗೂ ನ್ಯೂಜಿಲೆಂಡ್ ವಿರುದ್ಧದ ಪಂದ್ಯಗಳಲ್ಲಿ ಸೋತು ಟೂರ್ನಿಯಿಂದ ಬಹುತೇಕ ಹೊರಬಿದ್ದಿರುವ ಪಾಕಿಸ್ತಾನ ತಂಡದ ನಾಯಕ ಸೋಲಿನ ಹೊಣೆ ಹೊತ್ತು ನಿವೃತ್ತಿ ಘೋಷಿಸಲಿದ್ದಾರೆ.
ಟೂರ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಪಂದ್ಯ ನನ್ನ ಪಾಲಿಗೆ ಕೊನೆಯ ಪಂದ್ಯವಾಗಲಿದೆ ಎಂದು ಶಾಹಿದ್ ಅಫ್ರಿದಿ ಹೇಳಿದ್ದಾರೆ.