ಬಾಂಗ್ಲಾ ಕ್ರಿಕೆಟಿಗ ಮುಶ್ಫಿಕರ್ ರಹೀಮ್ (ಸಂಗ್ರಹ ಚಿತ್ರ) 
ಕ್ರಿಕೆಟ್

ಬಾಂಗ್ಲಾ ಅಭಿಮಾನಿಗಳ ಕ್ಷಮೆ ಕೇಳಿದ ಮುಶ್ಫಿಕರ್ ರಹೀಮ್

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ಭಾರತದ ವಿರುದ್ಧ ನಡೆದ ಪಂದ್ಯದಲ್ಲಿ ಗೆಲುವಿಗೂ ಮುನ್ನವೇ ಸಂಭ್ರಮಾಚರಣೆಯಲ್ಲಿ ಸೋಲಿನ ಬಳಿಕ ಮುಜಗರಕ್ಕೊಳಗಾಗಿದ್ದ...

ಬೆಂಗಳೂರು: ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ಭಾರತದ ವಿರುದ್ಧ ನಡೆದ ಪಂದ್ಯದಲ್ಲಿ ಗೆಲುವಿಗೂ ಮುನ್ನವೇ ಸಂಭ್ರಮಾಚರಣೆಯಲ್ಲಿ ಸೋಲಿನ ಬಳಿಕ ಮುಜಗರಕ್ಕೊಳಗಾಗಿದ್ದ  ಬಾಂಗ್ಲಾದೇಶ ಕ್ರಿಕೆಟಿಗ ಮುಶ್ಫಿಕರ್ ರಹೀಮ್ ಬಾಂಗ್ಲಾ ಅಭಿಮಾನಿಗಳ ಕ್ಷಮೆ ಕೋರಿದ್ದಾರೆ.

ಸೋಲಿನ ಬಳಿಕ ಇದೇ ಮೊದಲ ಬಾರಿಗೆ ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಿರುವ ಮುಶ್ಫಿಕರ್ ಭಾರತದ ಎದುರು ಬಾಂಗ್ಲಾದೇಶದ ಸೋಲಿಗೆ ಸಂಬಂಧಿಸಿದಂತೆ ಕ್ಷಮೆ ಕೋರಿದ್ದಾರೆ.  ಬುಧವಾರ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಭಾರತ ನೀಡಿದ 147 ರನ್ ಗಳ ಗುರಿ ಬೆನ್ನಟ್ಟಿದ ಬಾಂಗ್ಲಾದೇಶ ತಂಡ ನಿಗದಿತ 20 ಓವರ್ ಗಳಲ್ಲಿ 146 ರನ್  ಗಳಿಸಿ 1 ಅಂತರದಿಂದ ರೋಚಕ ಸೋಲು ಕಂಡಿತ್ತು.

ಪಂದ್ಯದ ಅಂತಿಮ ಓವರ್ ನಲ್ಲಿ ಸತತ 2 ಬೌಂಡರಿ ಸಿಡಿಸಿ ಬಾಂಗ್ಲಾ ತಂಡವನ್ನು ಬಹುತೇಕ ಗೆಲುವಿನ ಸನಿಹಕ್ಕೆ ತಂದಿದ್ದ ಮುಶ್ಫಿಕರ್ ರಹೀಮ್ ಆಗಲೇ ಗೆಲುವಿನ ಸಂಭ್ರಮಾಚರಣೆ  ಮಾಡಿದ್ದರು. ಆದರೆ ನಾಲ್ಕನೇ ಎಸೆತದಲ್ಲಿ ಅನಗತ್ಯ ಹೊಡೆತಕ್ಕೆ ಕೈಹಾಕಿ ವಿಕೆಟ್ ಕೈಚೆಲ್ಲುವ ಮೂಲಕ ಬಾಂಗ್ಲಾದೇಶದ ಸೋಲಿಗೆ ಪರೋಕ್ಷ ಕಾರಣರಾಗಿದ್ದರು. ಇದೀಗ ತಮ್ಮ ತಪ್ಪಿನ ಅರಿವಾಗಿ  ಬಾಂಗ್ಲಾ ಅಭಿಮಾನಿಗಳ ಕ್ಷಮೆ ಕೋರಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

SCROLL FOR NEXT