ಮುಂಬೈ: ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಗುರುವಾರ ನಡೆದ 2ನೇ ಸೆಮಿ ಫೈನಲ್ ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಸೋತ ಭಾರತ ತಂಡ ಟಿ20 ಟೂರ್ನಿಯಿಂದ ಹೊರಬಿದ್ದಿರಬಹುದು. ಆದರೆ ತನ್ನ ಉತ್ತಮ ಪ್ರದರ್ಶನದಿಂದ ಕ್ರೀಡಾಭಿಮಾನಿಗಳು ಹೃದಯ ಗೆಲ್ಲುವಲ್ಲಿ ಯಶಸ್ವಿಯಾಗಿದೆ.
ನಿನ್ನೆ ರೋಚಕ ಪಂದ್ಯದಲ್ಲಿ ಭಾರತದ ಬ್ಯಾಟಿಂಗ್ ಗೆ ಎಲ್ಲಡೆ ಶ್ಲಾಘನೆ ವ್ಯಕ್ತವಾಗಿದ್ದು, ಕ್ಷೇತ್ರ ರಕ್ಷಣೆ ಕ್ರಿಕೆಟ್ ದಿಗ್ಗಜರ ಮೆಚ್ಚುಗೆಗೆ ಪಾತ್ರವಾಗಿದೆ. ಆದರೆ ಬೌಲಿಂಗ್ ನಲ್ಲಿ ಮಾಡಿದ ಒಂದಷ್ಟು ಯಡವಟ್ಟುಗಳ ಪಂದ್ಯ ಭಾರತ ಕೈಜಾರುವಂತೆ ಮಾಡಿತು ಎಂದು ಹಿರಿಯ ಕ್ರಿಕೆಟಿಗರು ಅಭಿಪ್ರಾಯಪಟ್ಟಿದ್ದಾರೆ. ಖ್ಯಾತ ಮಾಜಿ ಕ್ರಿಕೆಟಿಗ ಕಪಿಲ್ ದೇವ್, ಸಚಿನ್ ತೆಂಡೂಲ್ಕರ್ ಸೇರಿದಂತೆ ಹಲುವ ಖ್ಯಾತನಾಮರು ಭಾರತ ತಂಡ ಪ್ರದರ್ಶನವನ್ನು ತುಂಬು ಹೃದಯದಿಂದ ಶ್ಲಾಘಿಸಿದ್ದಾರೆ.
ಖ್ಯಾತ ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ತಮ್ಮ ಅಭಿಪ್ರಾಯ ಹಂಚಿಕೊಳ್ಳಲಾಗಿದ್ದು, ಯಾರು ಏನು ಹೇಳಿದರು? ಇಲ್ಲಿವೆ ಒಂದಷ್ಟು ಅಭಿಪ್ರಾಯಗಳು..
#IndvsWI..you win some - you lose some but a great game of cricket .. Well played WI and hard luck #TeamIndia .. Sad but still proud