ವಿರಾಟ್ ಕೊಹ್ಲಿ, ಡೇನಿಯಲ್ ವೇಟೋರಿ 
ಕ್ರಿಕೆಟ್

ಭಾರತ ಕೋಚ್ ಹುದ್ದೆಗೆ ಕಿವೀಸ್‌ನ ವೇಟೋರಿ ಹೆಸರು ಸೂಚಿಸಿದ ಕೊಹ್ಲಿ

ಭಾರತದ ಕ್ರಿಕೆಟ್ ತಂಡದ ಕೋಚ್ ಹುದ್ದೆಗೆ ನ್ಯೂಜಿಲೆಂಡ್ ನ ಮಾಜಿ ಸ್ಪಿನ್ನರ್ ಡೇನಿಯಲ್ ವೇಟೋರಿ ಅವರ ಹೆಸರನ್ನು ಟೀಂ ಇಂಡಿಯಾ ಸ್ಫೋಟಕ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ...

ಭಾರತದ ಕ್ರಿಕೆಟ್ ತಂಡದ ಕೋಚ್ ಹುದ್ದೆಗೆ ನ್ಯೂಜಿಲೆಂಡ್ ನ ಮಾಜಿ ಸ್ಪಿನ್ನರ್ ಡೇನಿಯಲ್ ವೇಟೋರಿ ಅವರ ಹೆಸರನ್ನು ಟೀಂ ಇಂಡಿಯಾ ಸ್ಫೋಟಕ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಸೂಚಿಸಿದ್ದಾರೆ.

ಸದ್ಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಬಿಗ್ ಬ್ಯಾಷ್ ಲೀಗ್(ಬಿಬಿಎಲ್)ನ ಬ್ರಿಸ್ಬೇನ್ ಹಿಟ್ ತಂಡದ ಮಾರ್ಗದರ್ಶಕರಾಗಿ ಕಾರ್ಯನಿರ್ವಹಿಸುತ್ತಿರುವ ವೇಟೋರಿ ಪರವಾಗಿ ಕೊಹ್ಲಿ ಬ್ಯಾಟ್ ಮಾಡಿದ್ದಾರೆ.

ಸದ್ಯ ಟೀಂ ಇಂಡಿಯಾದ ಟೆಸ್ಟ್ ನಾಯಕನಾಗಿರುವ ವಿರಾಟ್ ಕೊಹ್ಲಿ ಪ್ರತಿಷ್ಠಿತ ಟೀಂ ಇಂಡಿಯಾ ಕೋಚ್ ಹುದ್ದೆಗೆ ಡೇನಿಯಲ್ ವೇಟೋರಿ ಸರಿಯಾದ ವ್ಯಕ್ತಿ ಎಂದು ಕೊಹ್ಲಿ ಅಭಿಪ್ರಾಯಪಟ್ಟಿದ್ದಾರೆ.

ಜೂನ್ ನಿಂದ ಮುಂದಿನ ವರ್ಷದ ಮಾರ್ಚ್ ವರೆಗೂ ಟೀಂ ಇಂಡಿಯಾ 18 ಟೆಸ್ಟ್ ಪಂದ್ಯಗಳನ್ನು ಆಡಲಿದ್ದು. ಯಾವುದೇ ಸಮಯದಲ್ಲಾದರೂ ಬಿಸಿಸಿಐ ಭಾರತದ ಕೋಚ್ ಆಯ್ಕೆಯನ್ನು ಘೋಷಿಸುವ ಸಾಧ್ಯತೆ ಇದೆ.  

ಕಳೆದ 2015ರ ವಿಶ್ವಕಪ್ ನ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋತ ಬಳಿಕ ಡೇನಿಯಲ್ ವೇಟೋರಿ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿ ಜೀವನಕ್ಕೆ ವಿದಾಯ ಘೋಷಿಸಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Pakಗೆ ಭಾರತ ಬಿಗ್ ಶಾಕ್: ದೆಹಲಿಯಲ್ಲಿ ಗರ್ಜಿಸಿದ ಬುಲ್ಡೋಜರ್; ಪಾಕಿಸ್ತಾನ ರಾಯಭಾರ ಕಚೇರಿ ಮುಂಭಾಗದ ಅನಧಿಕೃತ ನಿರ್ಮಾಣಗಳು ಧ್ವಂಸ..!

ಇರಾನ್ ಬೆನ್ನೆಲುಬು ಮುರಿಯಲು ಅಮೆರಿಕಾ ಪ್ಲ್ಯಾನ್: 'Economic D-Day' ಘೋಷಣೆ; ನೆರವು ನೀಡುವ ರಾಷ್ಟ್ರಗಳಿಗೂ ಕಾದಿದೆ ಗಂಡಾಂತರ..!

ಭಯೋತ್ಪಾದಕರ ರಕ್ಷಣೆಗೆ ವಿಶ್ವಸಂಸ್ಥೆ ವೇದಿಕೆ ಬಳಸದಿರಿ: ಪಾಕ್-ಚೀನಾಗೆ ಭಾರತದ ಖಡಕ್‌ ಎಚ್ಚರಿಕೆ

‘ಯಾವುದೇ ನ್ಯಾಯಾಲಯ ತಪ್ಪಿತಸ್ಥರೆಂದು ಘೋಷಿಸಿಲ್ಲ’: ಸಚಿವ ನಾಗೇಂದ್ರ ಕುರಿತು DCM ಡಾ.ಜಿ.ಪರಮೇಶ್ವರ್ ಸಮರ್ಥನೆ

ಲೋಕಸಭೆ ಸದಸ್ಯ ಬಲ 25 ವರ್ಷ ಯಥಾಸ್ಥಿತಿಯಲ್ಲಿ ಕಾಯ್ದುಕೊಳ್ಳಲು ಕಾಂಗ್ರೆಸ್ ಒತ್ತಾಯ; 2029ರಿಂದ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿಗೆ ಆಗ್ರಹ