ಕ್ರಿಕೆಟ್

ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ಶಶಾಂಕ್ ಮನೋಹರ್ ರಾಜಿನಾಮೆ

Lingaraj Badiger
ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಶಶಾಂಕ್ ಮನೋಹರ್ ಅವರು ಮಂಗಳವಾರ ರಾಜಿನಾಮೆ ನೀಡಿದ್ದಾರೆ.
ಅಕ್ಟೋಬರ್ 2015ರಲ್ಲಿ ಜಗಮೋಹನ್ ದಾಲ್ಮಿಯಾ ಅವರ ಸಾವಿನ ನಂತರ 2ನೇ ಬಾರಿ ಬಿಸಿಸಿಐ ಅಧ್ಯಕ್ಷರಾಗಿ ಶಶಾಂಕ್ ಮನೋಹರ್ ಅವರು ಅಧಿಕಾರ ವಹಿಸಿಕೊಂಡಿದ್ದರು. ಆದರೆ ಐಸಿಸಿ ಅಧ್ಯಕ್ಷರಾಗಿರುವವರು 2 ಸ್ಥಾನಗಳಲ್ಲಿ ಮುಂದುವರೆಯಬಾರದು ಎಂದು ಐಸಿಸಿ ಕಾರ್ಯನಿರ್ವಾಹಕ ಮಂಡಳಿ ನಿರ್ಣಯ ತೆಗೆದುಕೊಂಡ ಹಿನ್ನೆಲೆಯಲ್ಲಿ ಅವರು ಬಿಸಿಸಿಐ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
2015ರ ನವೆಂಬರ್​ನಿಂದ ಐಸಿಸಿ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿರುವ ಶಶಾಂಕ್ ಮನೋಹರ್ ಅವರು ಈ ಮೊದಲು 2008ರ ಸೆಪ್ಟೆಂಬರ್​ನಿಂದ 2011ರ ಸೆಪ್ಟೆಂಬರ್​ವರೆಗೆ ಬಿಸಿಸಿಐ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
ಶಶಾಂಕ್ ಮನೋಹರ್ ಬಿಸಿಸಿಐ ಕಾರ್ಯದರ್ಶಿ ಅನುರಾಗ್ ಠಾಕೂರ್​ಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ.
ವಿಶ್ವ ಕ್ರಿಕೆಟ್ ನಲ್ಲಿಯೇ ಶ್ರೀಮಂತ ಕ್ರಿಕೆಟ್ ಸಂಸ್ಥೆಯಾಗಿರುವ ಬಿಸಿಸಿಐ ನೂತನ ಅಧ್ಕಕ್ಷ ಸ್ಥಾನಕ್ಕೆ ಮೇ 14 ರಂದು ಚುನಾವಣೆ ನಡೆಯಲಿದೆ.
SCROLL FOR NEXT