ವಿರಾಟ್ ಕೊಹ್ಲಿ 
ಕ್ರಿಕೆಟ್

ಐಪಿಎಲ್ ಸೀಸನ್ ಒಂದರಲ್ಲಿ ಅತಿ ಹೆಚ್ಚು ರನ್ ಗಳಿಸಿದ ಅಗ್ರಮಾನ್ಯ 'ವಿರಾಟ್'

ಪ್ರಸ್ತುತ ಇಂಡಿಯನ್ ಪ್ರಿಮಿಯರ್ ಲೀಗ್ ನ ಟಾಪ್ ಮೊಸ್ಟ್ ಬ್ಯಾಟ್ಸ್ ಮನ್ ಯಾರು ಗೊತ್ತೆ... ಅದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ...

ಪ್ರಸ್ತುತ ಇಂಡಿಯನ್ ಪ್ರಿಮಿಯರ್ ಲೀಗ್ ನ ಟಾಪ್ ಮೊಸ್ಟ್ ಬ್ಯಾಟ್ಸ್ ಮನ್ ಯಾರು ಗೊತ್ತೆ... ಅದು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ.

ಹೌದು ಐಪಿಎಲ್ ಟೂರ್ನಿಯ ಇತಿಹಾಸದಲ್ಲಿ ಒಂದೇ ಸೀಸನ್ ನಲ್ಲಿ ಅತಿ ಹೆಚ್ಚು ರನ್ ಸಿಡಿಸಿದ ಖ್ಯಾತಿಗೆ ವಿರಾಟ್ ಕೊಹ್ಲಿ ಭಾಜನರಾಗಿದ್ದಾರೆ. ಇನ್ನು ಆರ್ಸಿಬಿ ತಂಡದ ಸ್ಫೋಟಕ ಬ್ಯಾಟ್ಸ್ ಮನ್ ಕ್ರಿಸ್ ಗೇಯ್ಲ್ ಹೆಸರಲ್ಲಿದ್ದ ದಾಖಲೆಯನ್ನು ಅಳಿಸಿ ಹಾಕಿದ್ದಾರೆ.

ವಿರಾಟ್ ಕೊಹ್ಲಿ
ಐಪಿಎಲ್ 9ನೇ ಆವೃತ್ತಿಯಲ್ಲಿ ಪ್ರತಿ ಪಂದ್ಯದಲ್ಲೂ ಮಿಂಚುತ್ತಿರುವ ವಿರಾಟ್ ಕೊಹ್ಲಿ ತಾನು ಆಡಿರುವ 12 ಪಂದ್ಯಗಳಲ್ಲಿ 83.55 ರ ಸರಾಸರಿಯಲ್ಲಿ 752 ರನ್ ಸಿಡಿಸಿದ್ದಾರೆ. ಇದು ಸದ್ಯದ ವಿಶ್ವದಾಖಲೆಯಾಗಿದೆ.ಇನ್ನು ಇದರಲ್ಲಿ 3 ಶತಕ ಹಾಗೂ 5 ಅರ್ಧಶತಕ ದಾಖಲಾಗಿವೆ. ಗುಜರಾತ್ ಲಯನ್ಸ್ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಅಜೇಯ 100 ರನ್ ಸಿಡಿಸುವ ಮೂಲಕ ಐಪಿಎಲ್ ನಲ್ಲಿ ಮೊದಲ ಶತಕ ದಾಖಲಿಸಿದ್ದರು. ಬಳಿಕ ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ವಿರುದ್ಧ ಅಜೇಯ 108 ರನ್ ಗಳಿಸಿ ಎರಡನೇ ಶತಕ ಸಿಡಿಸಿದ್ದರು. ಮತ್ತೆ ಗುಜರಾತ್ ಲಯನ್ಸ್ ವಿರುದ್ಧದ ಪಂದ್ಯದಲ್ಲಿ 109 ರನ್ ಗಳಿಸಿ ಸೀಸನ್ ಒಂದರಲ್ಲಿ ಮೂರು ಶತಕ ಸಿಡಿಸಿದ ದಾಖಲೆ ಮಾಡಿದ್ದರು.

ಕ್ರಿಸ್ ಗೇಯ್ಲ್
ಐಪಿಎಲ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡುತ್ತಿರುವ ಸ್ಫೋಟಕ ಬ್ಯಾಟ್ಸ್ ಮನ್ ಕ್ರಿಸ್ ಗೇಯ್ಲ್ 2012ರ ಐಪಿಎಲ್ ನಲ್ಲಿ ಸೀಸನ್ ಒಂದರಲ್ಲಿ ಅತಿ ಹೆಚ್ಚು ರನ್ ಗಳಿಸಿ ದಾಖಲೆ ಮಾಡಿದ್ದರು. ಈ ವೇಳೆ ಅವರು 14 ಇನ್ನಿಂಗ್ಸ್ ನಲ್ಲಿ ಆಡಿ 733 ರನ್ ಗಳಿಸಿದ್ದರು. ಇದರಲ್ಲಿ 1 ಶತಕ ಹಾಗೂ 7 ಅರ್ಧಶತಕ ದಾಖಲಾಗಿದ್ದವು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!