ಮುಂಬೈ: ಟೀಂ ಇಂಡಿಯಾ ಕೋಚ್ ಹುದ್ದೆಗೆ ಟೀಂ ಇಂಡಿಯಾ ಮಾಜಿ ಆಟಗಾರ 'ಗೋಡೆ' ಖ್ಯಾತಿಯ ರಾಹುಲ್ ದ್ರಾವಿಡ್ ಸೂಕ್ತ ವ್ಯಕ್ತಿ ಎಂದು ಸ್ಪಿನ್ನರ್ ಹರ್ಭಜನ್ ಸಿಂಗ್ ಹೇಳಿದ್ದಾರೆ.
ಟೀ ಇಂಡಿಯಾ ಕೋಚ್ ಹುದ್ದೆ ಸಂಬಂಧಿಸಿದಂತೆ ಹಲವು ನಾಯಕರ ಹೆಸರುಗಳು ಕೇಳಿ ಬರುತ್ತಿವೆ. ಕೆಲ ಹಿರಿಯ ಆಟಗಾರರ ಪರ ಕಿರಿಯ ಆಟಗಾರರು ಬ್ಯಾಟಿಂಗ್ ಮಾಡುತ್ತಿದ್ದಾರೆ. ಈ ಮಧ್ಯೆ ಹರ್ಭಜನ್ ಸಿಂಗ್ ಕೋಚ್ ಹುದ್ದೆಗೆ ರಾಹುಲ್ ದ್ರಾವಿಡ್ ಹಾಗೂ ಬೌಲಿಂಗ್ ಕೋಚ್ ಆಗಲು ಜಹೀರ್ ಖಾನ್ ಸೂಕ್ತ ವ್ಯಕ್ತಿ ಎಂದು ಹೇಳಿದ್ದಾರೆ.
ಇತ್ತೀಚೆಗಷ್ಟೇ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ನಾಯಕ ರಿಕಿ ಪಾಂಟಿಂಗ್ ಕೋಚ್ ಹುದ್ದೆಗೆ ದ್ರಾವಿಡ್ ಗಿಂತ ಮತ್ತೊಂದು ಉತ್ತಮ ಆಯ್ಕೆ ಇಲ್ಲ ಎಂದಿದ್ದರು.