ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರಿಕೆಟ್

ಬಿಸಿಸಿಐ ಅಧ್ಯಕ್ಷ ಹುದ್ದೆ ಮುಳ್ಳಿನ ಕಿರೀಟವಲ್ಲ, ಪ್ರತಿ ಜವಾಬ್ದಾರಿಯಲ್ಲೂ ಸವಾಲಿರುತ್ತದೆ: ಸೌರವ್ ಗಂಗೂಲಿ

ಬಿಸಿಸಿಐನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಅನುರಾಗ್ ಠಾಕೂರ್ ತಮ್ಮ ಹಿಂದಿನ ಅಧ್ಯಕ್ಷರ ಪರಂಪರೆಯನ್ನು ಜವಾಬ್ದಾರಿಯುತವಾಗಿ ಮುನ್ನಡೆಸಬೇಕು ಎಂದು ಸೌರವ್ ಗಂಗೂಲಿ ಹೇಳಿದ್ದಾರೆ.

ಸೌರವ್ ಗಂಗೂಲಿ
Srinivas Rao BV
Updated On : 22 May 2016, 4:29 am

ನವದೆಹಲಿ: ಬಿಸಿಸಿಐನ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಅನುರಾಗ್ ಠಾಕೂರ್ ತಮ್ಮ ಹಿಂದಿನ ಅಧ್ಯಕ್ಷರ ಪರಂಪರೆಯನ್ನು ಜವಾಬ್ದಾರಿಯುತವಾಗಿ ಮುನ್ನಡೆಸಬೇಕು ಎಂದು ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ ಹೇಳಿದ್ದಾರೆ.
ಬಿಸಿಸಿಐ ನ ಅಧ್ಯಕ್ಷ ಹುದ್ದೆ ಮುಳ್ಳಿನ ಕಿರೀಟವಲ್ಲ, ಪ್ರತಿಯೊಂದು ಹುದ್ದೆಯಲ್ಲೂ ಸವಾಲುಗಳು ಇರುತ್ತವೆ, ಆದ್ದರಿಂದ ಬಿಸಿಸಿಐ ಅಧ್ಯಕ್ಷರ ಹುದ್ದೆಯನ್ನು ಮುಳ್ಳಿನ ಕಿರೀಟ ಎಂದುಕೊಳ್ಳುವುದಕ್ಕೆ ಸಾಧ್ಯವಿಲ್ಲ ಎಂದು ಸೌರವ್ ಗಂಗೂಲಿ ಅಭಿಪ್ರಾಯಪಟ್ಟಿದ್ದಾರೆ. ಇದೇ ವೇಳೆ ಹೊನಲು ಬೆಳಕಿನ ಟೆಸ್ಟ್ ಪಂದ್ಯಕ್ಕೆ ಬೆಂಬಲ ಸೂಚಿಸಿದ್ದು ಭಾರತ ಸದ್ಯದಲ್ಲೇ ಇಂತಹ ಪಂದ್ಯಗಳನ್ನು ಆಯೋಜಿಸಲಿದೆ ಎಂದು ಭರವಸೆ ನೀಡಿದ್ದಾರೆ.
ಆಟಗಾರನ ಸಾಮರ್ಥ್ಯ ಅಳೆಯಲು ಟೆಸ್ಟ್ ಮಾದರಿಯ ಕ್ರಿಕೆಟ್ ಅತ್ಯುತ್ತಮವಾದ ಅವಕಾಶ, ಆದ್ದರಿಂದ ಹೊನಲು ಬೆಳಕಿನ ಟೆಸ್ಟ್ ಪಂದ್ಯವನ್ನು ಶೀಘ್ರವೇ ಆಯೋಜಿಸಲಾಗುತ್ತದೆ ಎಂದು ಗಂಗೂಲಿ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments