ಇಂಗ್ಲೆಂಡ್ ತಂಡದ ವೇಗಿ ಜೇಮ್ಸ್ ಆ್ಯಂಡರ್ ಸನ್ (ಸಂಗ್ರಹ ಚಿತ್ರ) 
ಕ್ರಿಕೆಟ್

ಐಸಿಸಿ ಟೆಸ್ಟ್ ರ‍್ಯಾಂಕಿಂಗ್‌: ಅಗ್ರಸ್ಥಾನಕ್ಕೇರಿದ ಆ್ಯಂಡರ್‌ಸನ್‌

ಐಸಿಸಿ ಟೆಸ್ಟ್ ರ‍್ಯಾಂಕಿಂಗ್‌ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಇದೇ ಮೊದಲ ಬಾರಿಗೆ ಇಂಗ್ಲೆಂಡ್‌ ತಂಡದ ಮಾರಕ ವೇಗಿ ಜೇಮ್ಸ್‌ ಆ್ಯಂಡರ್‌ಸನ್‌ ಅವರು ಟೆಸ್ಟ್‌ ಬೌಲರ್‌ಗಳ ವಿಶ್ವ ಕ್ರಮಾಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ...

ದುಬೈ: ಐಸಿಸಿ ಟೆಸ್ಟ್ ರ‍್ಯಾಂಕಿಂಗ್‌ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದ್ದು, ಇದೇ ಮೊದಲ ಬಾರಿಗೆ ಇಂಗ್ಲೆಂಡ್‌ ತಂಡದ ಮಾರಕ ವೇಗಿ ಜೇಮ್ಸ್‌ ಆ್ಯಂಡರ್‌ಸನ್‌ ಅವರು ಟೆಸ್ಟ್‌ ಬೌಲರ್‌ಗಳ  ವಿಶ್ವ ಕ್ರಮಾಂಕ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ.

ಜೇಮ್ಸ್ ಆ್ಯಂಡರಸ್ ಟೆಸ್ಟ್‌ ಬೌಲರ್‌ಗಳ ವಿಶ್ವ ಕ್ರಮಾಂಕ ಪಟ್ಟಿಯಲ್ಲಿ ಅಗ್ರಸ್ಥಾನ ಗಳಿಸಿದ ಇಂಗ್ಲೆಂಡ್‌ನ ನಾಲ್ಕನೇ ಬೌಲರ್‌ ಎನಿಸಿದ್ದು, ಇಯಾನ್‌ ಬಾಥಮ್‌ (1980), ಸ್ಟೀವ್‌ ಹ್ಯಾಮಿಲ್ಟನ್‌  (2004) ಮತ್ತು ಸ್ಟುವರ್ಟ್‌ ಬ್ರಾಡ್‌ ಅವರು ಮೊದಲು ಈ ಸಾಧನೆ ಮಾಡಿದ್ದರು. ತವರು ನೆಲದಲ್ಲಿ ಶ್ರೀಲಂಕಾ ವಿರುದ್ಧ ನಡೆದ ಮೊದಲ ಎರಡು ಪಂದ್ಯಗಳಲ್ಲಿ ಆ್ಯಂಡರ್‌ಸನ್‌ ಅಮೋಘ ಆಟ  ಆಡಿದ್ದರು. ಅವರ ಶಿಸ್ತಿನ ದಾಳಿಯ ಬಲದಿಂದ ಇಂಗ್ಲೆಂಡ್‌ ಎರಡೂ ಪಂದ್ಯಗಳಲ್ಲಿ ಗೆಲುವು ಗಳಿಸಿತ್ತು. ಆ ಮೂಲಕ ಆ್ಯಂಡರ್‌ಸನ್‌ ಅವರು ಒಟ್ಟು 884 ಪಾಯಿಂಟ್ಸ್‌ ಕಲೆಹಾಕಿ ಪಟ್ಟಿಯಲ್ಲಿ  ಮೊದಲ  ಬಾರಿಗೆ ಅಗ್ರಸ್ಥಾನ ಗಳಿಸಿದ್ದಾರೆ.

ಇನ್ನು ಪಟ್ಟಿಯಲ್ಲಿ ಭಾರತದ ಆಫ್‌ ಸ್ಪಿನ್ನರ್‌ ಅಶ್ವಿನ್‌ ಅವರು ಎರಡನೇ ಸ್ಥಾನ ಕಾಯ್ದುಕೊಂಡಿದ್ದು, ಅಶ್ವಿನ್‌  ಒಟ್ಟು 871ಅಂಕಗಳನ್ನು ಹೊಂದಿದ್ದಾರೆ. ಇನ್ನು ಇಂಗ್ಲೆಂಡ್‌ ತಂಡದ ಮತ್ತೊಬ್ಬ ವೇಗಿ  ಸ್ಟುವರ್ಟ್‌ ಬ್ರಾಡ್‌ ಮೂರನೇ ಸ್ಥಾನಕ್ಕೆ ಕುಸಿದಿದ್ದು, ಪಾಕಿಸ್ತಾನದ ಯಾಶಿರ್‌ ಶಾ, ದಕ್ಷಿಣ ಆಫ್ರಿಕಾದ ಡೇಲ್‌ ಸ್ಟೇಯ್ನ್‌ ಮತ್ತು ಭಾರತದ ರವೀಂದ್ರ ಜಡೇಜ ಅವರು ಕ್ರಮವಾಗಿ ನಾಲ್ಕರಿಂದ ಆರನೇ  ಸ್ಥಾನಗಳಲ್ಲಿದ್ದಾರೆ.

ಉಳಿದಂತೆ ಟೆಸ್ಟ್‌ ಬ್ಯಾಟ್ಸ್‌ಮನ್‌ಗಳ ಪಟ್ಟಿಯಲ್ಲಿ ಇಂಗ್ಲೆಂಡ್‌ ತಂಡದ ಉದಯೋನ್ಮುಖ ಪ್ರತಿಭೆ ಮೊಯೀನ್‌ ಅಲಿ 35ನೇ ಸ್ಥಾನಕ್ಕೆ ಬಡ್ತಿ ಪಡೆದಿದ್ದು, ಇದು ಅಲಿ ಅವರ ವೃತ್ತಿ ಜೀವನದ ಶ್ರೇಷ್ಠ  ರ‍್ಯಾಂಕಿಂಗ್‌‌ ಎನಿಸಿದೆ. ಇಂಗ್ಲೆಂಡ್‌ನ ಅಲೆಕ್ಸ್‌ ಹೇಲ್ಸ್‌ 47 ಸ್ಥಾನ ಮೇಲೇರಿದ್ದು, 70ನೇ ಸ್ಥಾನ ಗಳಿಸಿದ್ದಾರೆ. ಶ್ರೀಲಂಕಾದ ದಿನೇಶ್ ಚಾಂಡಿಮಲ್‌ 19ನೇ ಸ್ಥಾನದಲ್ಲಿದ್ದು, ಆಸ್ಟ್ರೇಲಿಯಾದ ಸ್ಟೀವನ್‌  ಸ್ಮಿತ್‌ ಅಗ್ರಸ್ಥಾನದಲ್ಲಿ ಮುಂದುವರಿದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಕೊಡಿ...ಆಶೀರ್ವಾದ.. ಸಿದ್ದರಾಮಯ್ಯ ಕಾಲಿಗೆ ಬಿದ್ದ ಡಿ ಕೆ ಶಿವಕುಮಾರ್.. ಪರಸ್ಪರ ಆಲಿಂಗನ, ಒಟ್ಟಿಗೆ ಬ್ರೇಕ್ ಫಾಸ್ಟ್-Photos

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT