ರಾಜ್ಕೋಟ್: ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯ ಮೊದಲ ಪಂದ್ಯದ ಪ್ರಥಮ ಇನ್ನಿಂಗ್ಸ್ ನಲ್ಲಿ ಟೀಂ ಇಂಡಿಯಾ ಪರ ಮುರಳಿ ವಿಜಯ್ ಮತ್ತು ಚೇತೇಶ್ವರ ಪೂಜಾರ ಶತಕ ಸಿಡಿಸಿದ್ದಾರೆ.
ರಾಜ್ ಕೋಟ್ ನಲ್ಲಿರುವ ಸೌರಾಷ್ಟ್ರ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮೊದಲ ಕ್ರಿಕೆಟ್ 3ನೇ ದಿನ ಮೊದಲ ಇನ್ನಿಂಗ್ಸ್ ಆರಂಭಿಸಿರುವ ಭಾರತ ತಂಡಕ್ಕೆ ಮುರಳಿ ವಿಜಯ್ ಅಜೇಯ 105 ಹಾಗೂ ಚೇತೇಶ್ವರ ಪೂಜಾರ ಅಜೇಯ 123 ರನ್ ಗಳಿಸಿದ್ದು ಟೀಂ ಇಂಡಿಯಾಗೆ ಭದ್ರ ಬುನಾದಿ ಹಾಕಿದ್ದಾರೆ. ಸದ್ಯ ಟೀಂ ಇಂಡಿಯಾ 90 ಓವರ್ ಗಳ ಮುಕ್ತಾಯಕ್ಕೆ 1 ವಿಕೆಟ್ ನಷ್ಟಕ್ಕೆ 273 ರನ್ ಕಲೆ ಹಾಕಿದೆ.
ಇನ್ನಿಂಗ್ಸ್ ಆರಂಭಿಸಿದ್ದ ಇಂಗ್ಲೆಂಡ್ 573 ರನ್ ಗಳಿಗೆ ಆಲೌಟ್ ಆಗಿತ್ತು. ಜೋ ರೂಟ್ 124, ಮೋಯಿನ್ ಅಲಿ 117, ಹಾಗೂ ಬೆನ್ ಸ್ಟೋಕ್ಸ್ 128 ರನ್ ಗಳಿಂದ ಇಂಗ್ಲೆಂಡ್ ಬೃಹತ್ ಮೊತ್ತ ಕಲೆ ಹಾಕಲು ಸಾಧ್ಯವಾಗಿತ್ತು.