ತವರಿನಲ್ಲಿ ಅಜೇಯ ದಾಖಲೆ ಸಮಗಟ್ಟಿದ ಟೀಂ ಇಂಡಿಯಾ
ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಗೆಲುವಿನೊಂದಿಗೆ ಟೀಂ ಇಂಡಿಯಾ ತವರಿನಲ್ಲಿ ಅಜೇಯ ದಾಖಲೆಯನ್ನು ಸಮಗಟ್ಟಿದೆ...
ಇಂಗ್ಲೆಂಡ್ ವಿರುದ್ಧದ ದ್ವಿತೀಯ ಟೆಸ್ಟ್ ಗೆಲುವಿನೊಂದಿಗೆ ಟೀಂ ಇಂಡಿಯಾ ತವರಿನಲ್ಲಿ ಅಜೇಯ ದಾಖಲೆಯನ್ನು ಸಮಗಟ್ಟಿದೆ.
2012ರ ಡಿಸೆಂಬರ್ ನಲ್ಲಿ ನಾಗ್ಪುರದಲ್ಲಿ ಇಂಗ್ಲೆಂಡ್ ತಂಡದ ವಿರುದ್ಧ ಡ್ರಾ ಪಂದ್ಯದ ಮೂಲಕ ಭಾರತ ಆಡಿದ 16 ಟೆಸ್ಟ್ ಪಂದ್ಯಗಳಲ್ಲಿ ಅಜೇಯವಾಗುಳಿದಿದೆ. ಇದಕ್ಕೂ ಮುನ್ನ 1960-64ರಲ್ಲಿ 16 ಪಂದ್ಯಗಳಲ್ಲಿ ಅಜೇಯ ಸಾಧನೆ ಮಾಡಿತ್ತು.
ವಿಶಾಖಪಟ್ಟಣಂ ಪಂದ್ಯದ ಅಂತ್ಯಕ್ಕೆ 13 ಗೆಲುವು ಮತ್ತು 3 ಡ್ರಾ ಫಲಿತಾಂಶ ಕಂಡಿದೆ. 2013ರಲ್ಲಿ ಆಸ್ಟ್ರೇಲಿಯಾ ವಿರುದ್ಧ 4-0 ಸರಣಿ ಜಯ, ಅದೇ ವರ್ಷ ವೆಸ್ಟ್ ಇಂಡೀಸ್ ವಿರುದ್ಧ 2-0 ಗೆಲುವು, ಕಳೆದ ವರ್ಷ ದಕ್ಷಿಣ ಆಫ್ರಿಕಾ ವಿರುದ್ಧದ 3-0ಯಿಂದ ಜಯಿಸಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.