ಮಾಜಿ ನಾಯಕ ರಿಕಿ ಪಾಂಟಿಂಗ್ ಆಸ್ಟ್ರೇಲಿಯಾ ತಂಡದ ಮುಂದಿನ ಕೋಚ್?
ಕ್ರಿಕೆಟ್ ನಲ್ಲಿ ಬಲಿಷ್ಠ ತಂಡ ಎಂದು ಕರೆಸಿಕೊಳ್ಳುತ್ತಿದ್ದ ಆಸ್ಟ್ರೇಲಿಯಾ ಸದ್ಯ ಸತತ ಸೋಲುಗಳಿಂದ ಕಂಗೆಟ್ಟಿದ್ದು ತಂಡಕ್ಕೆ ಚೇತರಿಕೆ ನೀಡಲು ಮುಖ್ಯ ಕೋಚ್ ಆಗಿ ರಿಕಿ...
ಸಿಡ್ನಿ: ಕ್ರಿಕೆಟ್ ನಲ್ಲಿ ಬಲಿಷ್ಠ ತಂಡ ಎಂದು ಕರೆಸಿಕೊಳ್ಳುತ್ತಿದ್ದ ಆಸ್ಟ್ರೇಲಿಯಾ ಸದ್ಯ ಸತತ ಸೋಲುಗಳಿಂದ ಕಂಗೆಟ್ಟಿದ್ದು ತಂಡಕ್ಕೆ ಚೇತರಿಕೆ ನೀಡಲು ಮುಖ್ಯ ಕೋಚ್ ಆಗಿ ರಿಕಿ ಪಾಂಟಿಂಗ್ ಆಯ್ಕೆಯಾಗುವ ಸಾಧ್ಯತೆ ಇದೆ.
ಆಸ್ಟ್ರೇಲಿಯಾ ತಂಡದ ಮುಖ್ಯ ಆಯ್ಕೆಗಾರ ರಾಡ್ ಮಾರ್ಷ್ ಆಫ್ರಿಕಾ ವಿರುದ್ಧ 2ನೇ ಟೆಸ್ಟ್ ಪಂದ್ಯದ ಹೀನಾಯ ಸೋಲಿನ ಹಿನ್ನೆಲೆ ರಾಜಿನಾಮೆ ನೀಡಿದ್ದು ಪ್ರಸ್ತುತ ಮುಖ್ಯ ಕೋಚ್ ಆಗಿರುವ ಲೆಹ್ಮನ್ ಪದತ್ಯಾಗಕ್ಕೂ ಭಾರೀ ಒತ್ತಾಯ ಕೇಳಿಬಂದಿದೆ.
ಸದ್ಯ ರಿಕಿ ಪಾಂಟಿಂಗ್ ಮುಂಬೈ ಇಂಡಿಯನ್ಸ್ ಐಪಿಎಲ್ ತಂಡದ ಹೊಣೆಗಾರಿಕೆಯಿಂದ ಹಿಂದೆ ಸರಿದಿದ್ದು ಮತ್ತು ಆಸ್ಟ್ರೇಲಿಯಾ ಕೋಚ್ ಹುದ್ದೆ ವಹಿಸಿಕೊಳ್ಳಲು ಸಿದ್ಧ ಎಂದು ಹೇಳಿರುವುದು ಬಿಸಿ ಬಿಸಿ ಚರ್ಚೆಗೆ ಗ್ರಾಸವಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.