3ನೇ ಟೆಸ್ಟ್: ಅಲ್ಪಮೊತ್ತಕ್ಕೆ ಕುಸಿಯುವ ಭೀತಿಯಲ್ಲಿ ಇಂಗ್ಲೆಂಡ್ 215/6
ಇಂಗ್ಲೆಂಡ್-ಟೀಂ ಇಂಡಿಯಾ ನಡುವಿನ 3ನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಇಂಗ್ಲೆಂಡ್ 6 ವಿಕೆಟ್ ನಷ್ಟಕ್ಕೆ 215 ರನ್ ಗಳಿಸಿ ಆಡುತ್ತಿದೆ...
ಮೊಹಾಲಿ: ಇಂಗ್ಲೆಂಡ್-ಟೀಂ ಇಂಡಿಯಾ ನಡುವಿನ 3ನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಇಂಗ್ಲೆಂಡ್ 6 ವಿಕೆಟ್ ನಷ್ಟಕ್ಕೆ 215 ರನ್ ಗಳಿಸಿ ಆಡುತ್ತಿದೆ.
ಮೊಹಾಲಿಯ ಬಿಂದ್ರಾ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ಅಲ್ಪಮೊತ್ತಕ್ಕೆ ಆಲೌಟ್ ಆಗುವ ಭೀತಿಯಲ್ಲಿದೆ.
ಇಂಗ್ಲೆಂಡ್ ಪರ ಅಲೆಸ್ಟೈರ್ ಕುಕ್ 27, ಹಸೀಬ್ ಹಮೀದ್ 9, ಜೋ ರೂಟ್ 15, ಮೊಯಿನ್ ಅಲಿ 16, ಬೆನ್ ಸ್ಟೋಕ್ಸ್ 29, ಜಾಸ್ ಬಟ್ಲರ್ 43, ಜಾನಿ ಬೇರ್ ಸ್ಟೋ ಅಜೇಯ 70 ಹಾಗೂ ಕ್ರಿಸ್ ವೋಕ್ಸ್ ಅಜೇಯ 2 ರನ್ ಗಳಿಸಿದ್ದಾರೆ.
ಟೀಂ ಇಂಡಿಯಾ ಪರ ರವೀಂದ್ರ ಜಡೇಜಾ 2, ಶಮಿ, ಉಮೇಶ್ ಯಾದವ್, ಆರ್ ಅಶ್ವಿನ್ ತಲಾ 1 ವಿಕೆಟ್ ಪಡೆದಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.