ವಿರಾಟ್ ಕೊಹ್ಲಿ, ಬೆನ್ ಸ್ಟೋಕ್ಸ್
ಮೊಹಾಲಿ: ಟೀಂ ಇಂಡಿಯಾ ಟೆಸ್ಟ್ ತಂಡದ ನಾಯಕನಾದ ಬಳಿಕ ಅಗ್ರೇಸಿವ್ ಆಟದಿಂದ ಕೊಂಚ ದೂರ ಉಳಿದಿದ್ದ ವಿರಾಟ್ ಕೊಹ್ಲಿ ಇದೀಗ ಮೊಹಾಲಿಯಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಪಂದ್ಯದ ವೇಳೆ ಇಂಗ್ಲೆಂಡ್ ಆಟಗಾರನ ಜತೆ ವಾಗ್ವಾದ ನಡೆಸಿದ್ದಾರೆ.
ಮೊಹಾಲಿಯಲ್ಲಿ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಇಂಗ್ಲೆಂಡ್ ತಂಡದ ಆಟಗಾರ ಬೆನ್ ಸ್ಟೋಕ್ಸ್ ಜತೆ ವಾಗ್ವಾದಕ್ಕಿಳಿದಿರುವ ಘಟನೆ ನಡೆದಿದೆ. ರವೀಂದ್ರ ಜಡೇಜಾ ಬೌಲಿಂಗ್ ಮಾಡುತ್ತಿದ್ದ ವೇಳೆ ಬೆನ್ ಸ್ಟೋಕ್ಸ್ ಮುಂದೆ ಬಂದು ಹೊಡೆಯಲು ಯತ್ನಿಸಿ ಸ್ಟಂಪ್ ಔಟ್ ಆದರು.
ಈ ವೇಳೆ ಟೀಂ ಇಂಡಿಯಾ ಆಟಗಾರರು ಖುಷಿಯಲ್ಲಿ ಸಂಭ್ರಮಿಸುತ್ತಿದ್ದಾಗ ಕೊಹ್ಲಿ-ಸ್ಟೋಕ್ಸ್ ನಡುವೆ ಮಾತಿನ ಸಮರ ನಡೆಸಿದ್ದಾರೆ. ಇದು ಕೆಲ ನಿಮಿಷಗಳ ಕಾಲ ಮುಂದುವರಿದಾಗ ಮೈದಾನದಲ್ಲಿದ್ದ ಅಂಪೈರ್ ಮರೈಸ್ ಎರಾಸ್ಮಸ್ ಮಧ್ಯಪ್ರವೇಶಿಸಿ ಇಬ್ಬರನ್ನು ಸಮಾಧಾನಪಡಿಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics