ಮುಂಬೈ: ಮಾಜಿ ಕ್ರಿಕೆಟಿಗ ಎಸ್ ಶ್ರೀಶಾಂತ್ ಗಂಡು ಮಗುವಿಗೆ ತಂದೆಯಾಗಿದ್ದಾರೆ.
ಪತ್ನಿ ಭುವನೇಶ್ವರಿ ಮುಂಬೈನ ಸೂರ್ಯ ಆಸ್ಪತ್ರೆಯಲ್ಲಿ ನವೆಂಬರ್ 23 ರಂದು ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಶ್ರೀಶಾಂತ್ ಭುವನೇಶ್ವರಿ ದೇವಿ ಮೊದಲ ಹೆಣ್ಣು ಮಗುವಿಗೆ ಜನ್ಮನೀಡಿದ್ದರು. ಎರಡನೇ ಬಾರಿ ತಂದೆಯಾಗಿದ್ದಕ್ಕೆ ಶ್ರೀಶಾಂತ್ ಸಾಮಾಜಿಕ ಜಾಲತಾಣದಲ್ಲಿ ಸಂತಸವನ್ನು ಹಂಚಿಕೊಂಡಿದ್ದಾರೆ.
ಸೂರ್ಯ ಆಸ್ಪತ್ರೆಯಲ್ಲಿ ಮಗು ಜನಿಸಿರುವುದರಿಂದ ಸೂರ್ಯಶ್ರೀ ಎಂದು ನಾಮಕರ ಮಾಡಿದ್ದೇವೆ. ತಾಯಿ ಮತ್ತು ಮಗು ಆರೋಗ್ಯದಿಂದಿದ್ದಾರೆ ಎಂದು ಶ್ರೀಶಾಂತ್ ತಿಳಿಸಿದ್ದಾರೆ.