ಕೇರಂ ಸ್ಪಿನ್ ಮಾಂತ್ರಿಕ ಆರ್ ಅಶ್ವಿನ್ ನೂತನ ದಾಖಲೆಯೊಂದನ್ನು ನಿರ್ಮಿಸಿದ್ದಾರೆ. ಪ್ರಸಕ್ತ ವರ್ಷದಲ್ಲಿ 530 ರನ್ ಗಳಿಸಿರುವ ಅಶ್ವಿನ್ 56 ವಿಕೆಟ್ ಗಳನ್ನು ಗಳಿಸಿದ್ದಾರೆ.
ರವಿಚಂದ್ರನ್ ಅಶ್ವಿನ್ ಈ ವರ್ಷ ಈ ಸಾಧನೆ ಮಾಡಿದ ವಿಶ್ವದ ಮೊದಲ ಕ್ರಿಕೆಟಿಗ ಎಂಬ ಖ್ಯಾತಿಗೆ ಭಾಜನರಾಗಿದ್ದು ಒಟ್ಟಾರೆ ಭಾರತದ ಪರ 3ನೇ ಬಾರಿಗೆ ಇಂತಹ ಸಾಧನೆ ಮಾಡಿದ್ದಾರೆ.
1983ರಲ್ಲಿ ಕಪಿಲ್ ದೇವ್ 579 ರನ್ ಬಾರಿಸಿ 75 ವಿಕೆಟ್ ಗಳಿಸಿದ್ದು ಭಾರತದ ಪರ ಶ್ರೇಷ್ಠ ಸಾಧನೆ ಯಾಗಿದೆ.
ಇಂಗ್ಲೆಂಡ್ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಆರ್ ಅಶ್ವಿನ್ ಮೊದಲ ಇನ್ನಿಂಗ್ಸ್ ನಲ್ಲಿ ಅಜೇಯ 57 ರನ್ ಗಳಿಸಿ ಈ ಸಾಧನೆ ಮಾಡಿದ್ದಾರೆ.