ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರಿಕೆಟ್

3ನೇ ಟೆಸ್ಟ್: ಸಾಧಾರಣ ಮೊತ್ತ ಗಳಿಸಿ ಆಡುತ್ತಿರುವ ಟೀಂ ಇಂಡಿಯಾ

ನ್ಯೂಜಿಲೆಂಡ್ ವಿರುದ್ಧದ ಮೂರು ಟೆಸ್ಟ್ ಸರಣಿ ಪೈಕಿ ಎರಡು ಪಂದ್ಯಗಳನ್ನು ಗೆಲ್ಲುವ ಮೂಲಕ ಸರಣಿ ಕೈವಶ ಮಾಡಿಕೊಂಡಿರುವ ಟೀಂ ಇಂಡಿಯಾ ಇದೀಗ ಮೂರನೇ...

ವಿರಾಟ್ ಕೊಹ್ಲಿ
Vishwanath S
Updated On : 8 Oct 2016, 2:54 am
ಇಂದೋರ್: ನ್ಯೂಜಿಲೆಂಡ್ ವಿರುದ್ಧದ ಮೂರು ಟೆಸ್ಟ್ ಸರಣಿ ಪೈಕಿ ಎರಡು ಪಂದ್ಯಗಳನ್ನು ಗೆಲ್ಲುವ ಮೂಲಕ ಸರಣಿ ಕೈವಶ ಮಾಡಿಕೊಂಡಿರುವ ಟೀಂ ಇಂಡಿಯಾ ಇದೀಗ ಮೂರನೇ ಟೆಸ್ಟ್ ಪಂದ್ಯದಲ್ಲಿ 60 ಓವರ್ ಮುಕ್ತಾಯಕ್ಕೆ 3 ವಿಕೆಟ್ ನಷ್ಟಕ್ಕೆ 161 ರನ್ ಗಳಿಸಿದೆ. 
ಇಂದೋರ್ ನ ಹೊಲ್ಕರ್ ಕ್ರಿಕೆಟ್ ಕ್ರೀಡಾಂಗಣದಲ್ಲಿ ಟಾಸ್ ಗೆದ್ದು ಟೀಂ ಇಂಡಿಯಾ ಬ್ಯಾಟಿಂಗ್ ಮಾಡುತ್ತಿದ್ದು ಪ್ರಥಮ ಇನ್ನಿಂಗ್ಸ್ ನಲ್ಲಿ 3 ವಿಕೆಟ್ ನಷ್ಟಕ್ಕೆ 161 ರನ್ ಗಳಿಸಿದೆ. 
ಇನ್ನಿಂಗ್ಸ್ ಆರಂಭಿಸಿದ ಮುರಳಿ ವಿಜಯ್ ಹಾಗೂ ಗೌತಮ್ ಗಂಭೀರ್ ರಿಂದ ಉತ್ತಮ ಆರಂಭದ ಆಟ ಕಾಣಲಿಲ್ಲ. ವಿಜಯ್ 10 ರನ್ ಗಳಿಸಿ ಔಟಾದರೆ, ಗಂಭೀರ್ 29 ರನ್ ಗಳಿಸಿ ಔಟಾದರು. ನಂತರ ಚೇತ್ವೇಶ್ವರ್ ಪೂಜಾರ ನಾಯಕ ವಿರಾಟ್ ಕೊಹ್ಲಿ ಜತೆ ಸೇರಿ ಉತ್ತಮ ಬ್ಯಾಟ್ ಬೀಸಿದರು. 41 ರನ್ ಗಳಿಸಿದ್ದಾಗ ಸ್ಯಾಂಟ್ನರ್ ಬೌಲಿಂಗ್ ನಲ್ಲಿ ಬೋಲ್ಡ್ ಆಗಿ ನಿರ್ಗಮಿಸಿದರು. 

Advertisement

Advertisement

ಸದ್ಯ ಮೈದಾನದಲ್ಲಿ ವಿರಾಟ್ ಕೊಹ್ಲಿ ಅಜೇಯ 56 ರನ್ ಹಾಗೂ ಅಜಿಂಕ್ಯ ರಹಾನೆ 21 ರನ್ ಗಳಿಸಿ ಆಟವಾಡುತ್ತಿದ್ದಾರೆ. ನ್ಯೂಜಿಲೆಂಡ್ ಪರ ಬೋಲ್ಟ್, ಪಟೇಲ್ ಹಾಗೂ ಸ್ಯಾಂಟ್ನರ್ ತಲಾ 1 ವಿಕೆಟ್ ಪಡೆದಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement