ಕ್ರಿಕೆಟ್

ವಿಶ್ವ ಚಾಂಪಿಯನ್ ಆಸ್ಟ್ರೇಲಿಯಾ ವೈಟ್ ವಾಷ್ ಮಾಡಿದ ಆಫ್ರಿಕಾ

Vishwanath S

ಕೇಪ್ ಟೌನ್: ವಿಶ್ವಕಪ್ ಚಾಂಪಿಯನ್ ಆಸ್ಟ್ರೇಲಿಯಾವನ್ನು 5-0ಯಿಂದ ದಕ್ಷಿಣ ಆಫ್ರಿಕಾ ಕ್ಲೀನ್ ಸ್ವಿಪ್ ಮಾಡಿದ್ದು, ಐದು ಪಂದ್ಯಗಳ ಸರಣಿಯಲ್ಲಿ ಆಸೀಸ್ ಗೆ ಇದು ಏಕದಿನ ಕ್ರಿಕೆಟ್ ಇತಿಹಾಸದ ಮೊದಲ ವೈಟ್ ವಾಷ್ ಆಘಾತವಾಗಿದೆ.

ಕೇಪ್ ಟೌನ್ ನ ನ್ಯೂಲಾಂಡ್ಸ್ ಕ್ರೀಡಾಂಗಣದಲ್ಲಿ ನಡೆದ ಐದನೇ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಆಸ್ಟ್ರೇಲಿಯಾ ವಿರುದ್ಧ 31 ರನ್ ಗಳಿಂದ ಜಯಗಳಿಸಿದ್ದು, ಈ ಮೂಲಕ 5 ಪಂದ್ಯಗಳನ್ನು ಗೆಲ್ಲುವ ಮೂಲಕ ದಕ್ಷಿಣ ಆಫ್ರಿಕಾ ತನ್ನ ಕ್ರಿಕೆಟ್ ನಲ್ಲಿ ಹೊಸ ಇತಿಹಾಸ ನಿರ್ಮಿಸಿದೆ.

ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಆಫ್ರಿಕಾ ನಿಗದಿತ ಓವರ್ ನಲ್ಲಿ 8 ವಿಕೆಟ್ ನಷ್ಟಕ್ಕೆ 327 ರನ್ ಕಲೆಹಾಕಿತು. 328 ರನ್ ಗಳ ಬೃಹತ್ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ 48.2 ಓವರ್ ನಲ್ಲಿ 296 ರನ್ ಗಳಿಗೆ ಆಲೌಟ್ ಆಗುವ ಮೂಲಕ ದಕ್ಷಿಣ ಆಫ್ರಿಕಾಗೆ ಶರಣಾಯಿತು.

ಆಸ್ಟ್ರೇಲಿಯಾ ಪರ ಡೇವಿಡ್ ವಾರ್ನರ್ 173 ರನ್ ಗಳನ್ನು ಸಿಡಿಸಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು. ಇನ್ನು ದಕ್ಷಿಣ ಆಫ್ರಿಕಾದ ರಿಲೀ ರೋಸ್ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದು ಸರಣಿಶ್ರೇಷ್ಠ ಪ್ರಶಸ್ತಿಗೆ ಭಾಜನರಾಗಿದ್ದಾರೆ.

SCROLL FOR NEXT