ಟೀಂ ಇಂಡಿಯಾ 
ಕ್ರಿಕೆಟ್

ನ್ಯೂಜಿಲೆಂಡ್ ವಿರುದ್ಧ ಟೀಂ ಇಂಡಿಯಾಗೆ ಸರಣಿ ಜಯ

ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿಯ ನಿರ್ಣಾಯಕ ಪಂದ್ಯದಲ್ಲಿ ಟೀಂ ಇಂಡಿಯಾ ಜಯ ಗಳಿಸಿದ್ದು ಸರಣಿ ಕೈವಶ ಮಾಡಿಕೊಂಡಿದೆ...

ವಿಶಾಖಪಟ್ಟಂ: ನ್ಯೂಜಿಲೆಂಡ್ ವಿರುದ್ಧ ಏಕದಿನ ಸರಣಿಯ ನಿರ್ಣಾಯಕ ಪಂದ್ಯದಲ್ಲಿ ಟೀಂ ಇಂಡಿಯಾ ಜಯ ಗಳಿಸಿದ್ದು ಸರಣಿ ಕೈವಶ ಮಾಡಿಕೊಂಡಿದೆ. 
ಐದು ಪಂದ್ಯಗಳ ಪೈಕಿ 2-2 ಪಂದ್ಯಗಳನ್ನು ಗೆಲ್ಲುವ ಮೂಲಕ ಸರಣಿಯಲ್ಲಿ ಸಮಬಲ ಸಾಧಿಸಿದ್ದ ಉಭಯ ತಂಡಗಳಿಗೆ ಈ ಪಂದ್ಯ ಮಹತ್ವದ್ದಾಗಿತ್ತು. ಅಂತಿಮ ಹಾಗೂ ನಿರ್ಣಾಯಕ ಪಂದ್ಯದಲ್ಲಿ ಟೀಂ ಇಂಡಿಯಾ ನ್ಯೂಜಿಲೆಂಡ್ ತಂಡವನ್ನು 79 ರನ್ ಗಳಿಗೆ ಆಲೌಟ್ ಮಾಡುವ ಮೂಲಕ 191 ರನ್ ಗಳ ಅಂತರದಿಂದ ಜಯ ಗಳಿಸಿದೆ. 
ಅಮಿತ್ ಮಿಶ್ರಾರ ಸ್ಪಿನ್ ದಾಳಿಗೆ ನ್ಯೂಜಿಲೆಂಡ್ ಆಟಗಾರರು ಪೆವಿಲಿಯನ್ ಪರೇಡ್ ನಡೆಸಿದ್ದರು. ಐದು ವಿಕೆಟ್ ಪಡೆದ ಮಿಶ್ರಾ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದರು. 
ನ್ಯೂಜಿಲೆಂಡ್ ಪರ ಗುಪ್ಟಿಲ್ 0, ಲ್ಯಾಥಮ್ 19, ಕೇನ್ ವಿಲಿಯಮನ್ಸ್ 27, ಟೇಲರ್ 19 ರನ್ ಗಳಿಸಿದ್ದಾರೆ. ಇನ್ನು ಟೀಂ ಇಂಡಿಯಾ ಪರ ಅಮಿತ್ ಮಿಶ್ರಾ 5 ವಿಕೆಟ್ ಪಡೆದರೆ, ಅಕ್ಷರ್ ಪಟೇಲ್ 2 ವಿಕೆಟ್ ಪಡೆದಿದ್ದಾರೆ.

ವೈಎಸ್ ರಾಜಶೇಕರ ರೆಡ್ಡಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಟೀಂ ಇಂಡಿಯಾ ನಿಗದಿತ ಓವರ್ ನಲ್ಲಿ 6 ವಿಕೆಟ್ ನಷ್ಟಕ್ಕೆ 269 ರನ್ ಗಳಿಸಿತ್ತು.

ಟೀಂ ಇಂಡಿಯಾ ಪರ ಅಜಿಂಕ್ಯ ರಹಾನೆ 20, ರೋಹಿತ್ ಶರ್ಮಾ 70, ವಿರಾಟ್ ಕೊಹ್ಲಿ 65, ಎಂಎಸ್ ಧೋನಿ 41, ಅಕ್ಷರ್ ಪಟೇಲ್ 24 ಹಾಗೂ ಕೇದರ್ ಜಾದವ್ ಅಜೇಯ 39 ರನ್ ಗಳಿಸಿದ್ದಾರೆ. 

ನ್ಯೂಜಿಲೆಂಡ್ ಪರ ಬೋಲ್ಟ್, ಸೋಧಿ ತಲಾ 2 ವಿಕೆಟ್ ಪಡೆದರೆ, ನೀಶಾಮ್, ಸ್ಯಾಟ್ನರ್ ತಲಾ 1 ವಿಕೆಟ್ ಪಡೆದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!