ನ್ಯೂಜಿಲ್ಯಾಂಡ್ ವಿರುದ್ಧದ ಟೆಸ್ಟ್ ಪಂದ್ಯಕ್ಕೆ ಭಾರತ ತಂಡ ಪ್ರಕಟ: ಸ್ಟುವರ್ಟ್‌ ಬಿನ್ನಿ ಶಾರ್ದೂಲ್ ಠಾಕೂರ್ ಗೆ ಕೋಕ್ 
ಕ್ರಿಕೆಟ್

ನ್ಯೂಜಿಲ್ಯಾಂಡ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ: ಸ್ಟುವರ್ಟ್‌ ಬಿನ್ನಿ, ಶಾರ್ದೂಲ್ ಠಾಕೂರ್ ಗೆ ಕೋಕ್

ನ್ಯೂಜಿಲ್ಯಾಂಡ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತದ ತಂಡವನ್ನು ಪ್ರಕಟಿಸಿರುವ ಬಿಸಿಸಿಐ ಆಯ್ಕೆ ಸಮಿತಿ ಆಲ್‌ರೌಂಡರ್‌ ಸ್ಟುವರ್ಟ್‌ ಬಿನ್ನಿ ಹಾಗೂ ವೇಗದ ಬೌಲರ್' ಶಾರ್ದೂಲ್ ಠಾಕೂರ್ ಅವರನ್ನು ತಂಡದಿಂದ...

ನವದೆಹಲಿ: ನ್ಯೂಜಿಲ್ಯಾಂಡ್ ವಿರುದ್ಧದ ಟೆಸ್ಟ್ ಸರಣಿಗೆ ಭಾರತದ ತಂಡವನ್ನು ಪ್ರಕಟಿಸಿರುವ ಬಿಸಿಸಿಐ ಆಯ್ಕೆ ಸಮಿತಿ ಆಲ್‌ರೌಂಡರ್‌ ಸ್ಟುವರ್ಟ್‌ ಬಿನ್ನಿ ಹಾಗೂ ವೇಗದ ಬೌಲರ್' ಶಾರ್ದೂಲ್ ಠಾಕೂರ್ ಅವರನ್ನು ತಂಡದಿಂದ ಕೈಬಿಟ್ಟಿದೆ.

ಸೆ.22 ರಿಂದ ಭಾರತ- ನ್ಯೂಜಿಲ್ಯಾಂಡ್ ನಡುವೆ ಕಾನ್ಪುರದಲ್ಲಿ ಮೂರು ಟೆಸ್ಟ್ ಪಂದ್ಯಗಳ ಸರಣಿ ಪ್ರಾರಂಭವಾಗಲಿದೆ. ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ, ಕೋಚ್ ಅನಿಲ್ ಕುಂಬ್ಳೆ ಅವರು ಭಾಗವಹಿಸಿದ್ದ ಆಯ್ಕೆ ಸಮಿತಿಯ ಸಭೆಯಲ್ಲಿ ಭಾರತದ ತಂಡವನ್ನು ಅಂತಿಮಗೊಳಿಸಲಾಗಿದೆ.

ಕಳೆದ 11 ಇನ್ನಿಂಗ್ಸ್ ಗಳಲ್ಲಿ ಕೇವಲ ಒಂದು ಅರ್ಧ ಶತಕ ದಾಖಲಿಸಿದ್ದರೂ ಸಹ ಓಪನರ್‌ ಶಿಖರ್‌ ಧವನ್‌ ಅವರನ್ನು ತಂಡದಲ್ಲೇ ಉಳಿಸಿಕೊಳ್ಳಲಾಗಿದೆ. ಉಳಿದಂತೆ ಬಹುತೇಕ ವೆಸ್ಟ್ ಇಂಡೀಸ್ ಟೆಸ್ಟ್ ಸರಣಿಯಲ್ಲಿ ಆಡಿದ್ದ ತಂಡವನ್ನೇ ಉಳಿಸಿಕೊಳ್ಳಲಾಗಿದೆ.

ವೆಸ್ಟ್ ಇಂಡೀಸ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ 17 ಕ್ರಿಕೆಟರ್ ಗಳ ತಂಡವನ್ನು ಅಂತಿಮಗೊಳಿಸಲಾಗಿತ್ತು. ಆದರೆ ನ್ಯೂಜಿಲ್ಯಾಂಡ್ ವಿರುದ್ಧದ ಟೆಸ್ಟ್ ಸರಣಿಗೆ ಇಬ್ಬರನ್ನು ಕೈಬಿಡಲಾಗಿದ್ದು ಉಳಿದ 15 ಆಟಗಾರರನ್ನು ಹಾಗೆಯೇ ಉಳಿಸಿಕೊಳ್ಳಲಾಗಿದೆ.

ನ್ಯೂಜಿಲ್ಯಾಂಡ್ ವಿರುದ್ಧ 13 ಟೆಸ್ಟ್ ಪಂದ್ಯಗಳ ಸರಣಿ, 8 ಏಕದಿನ ಪಂದ್ಯ ಹಾಗೂ 2 ಟಿ20 ಪಂದ್ಯಗಳನ್ನು ಆಯೋಜಿಸಲಾಗಿದೆ. ಟೆಸ್ಟ್ ಪಂದ್ಯಗಳನ್ನು ಕಾನ್ಪುರ (ಸೆ.22), ಕೋಲ್ಕತಾ(ಸೆ.30) ಇಂಡೋರ್( ಅಕ್ಟೊಬರ್ 8) ರಂದು ನಡೆಯಲಿವೆ.

ನ್ಯೂಜಿಲ್ಯಾಂಡ್ ವಿರುದ್ಧದ ಟೆಸ್ಟ್ ಪಂದ್ಯಗಳಿಗೆ ಆಯ್ಕೆಯಾಗಿರುವ ಭಾರತದ ತಂಡದ ವಿವರ: ವಿರಾಟ್ ಕೊಹ್ಲಿ(ನಾಯಕ) ಆರ್ ಅಶ್ವಿನ್, ಶಿಖರ್ ಧವನ್, ರವೀಂದ್ರ ಜಡೇಜಾ, ಭುವನೇಶ್ವರ್ ಕುಮಾರ್, ಅಮಿತ್ ಮಿಶ್ರಾ, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ, ಕೆಎಲ್ ರಾಹುಲ್, ವೃದ್ಧಿಮಾನ್ ಷಾ( ವಿಕೆಟ್ ಕೀಪರ್) ಇಶಾಂತ್ ಶರ್ಮಾ, ರೋಹಿತ್ ಶರ್ಮಾ, ಮುರಳಿ ವಿಜಯ್, ಉಮೇಶ್ ಯಾದವ್, ಮೊಹಮ್ಮದ್ ಶಮಿ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ನೇಮಕಾತಿ ಹಗರಣ: EDಯಿಂದ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್‌, ಸದಸ್ಯೆ ಗೀತಾ ಬಂಧನ!

ಚು.ಆಯೋಗದ ವಿರುದ್ಧ INDIA ಪ್ರತಿಭಟನೆ; 'ಕೈ' ನಾಯಕರು ಪೊಲೀಸ್ ವಶಕ್ಕೆ: ವ್ಯಾನ್ ನಿಂದ ಇಳಿದು ರಾಹುಲ್ ಜೊತೆ ಮರದ ಕೆಳಗೆ ಕುಳಿತ ಪ್ರಿಯಾಂಕ!

ಬೆಂಗಳೂರಿನಲ್ಲಿ 5 ಪ್ರತ್ಯೇಕ ಕಮಿಷನರೇಟ್‌ ಸ್ಥಾಪನೆ; 1,022 ಹೊಸ ಹುದ್ದೆ ಸೃಷ್ಟಿಗೆ ಸಚಿವ ಸಂಪುಟ ಅಸ್ತು

ಹಬ್ಬಗಳ ಹೊತ್ತಲ್ಲೆ ಕಾಂಗ್ರೆಸ್‌ನಿಂದ ಜನತೆಗೆ ಮತ್ತೊಂದು ಶಾಕ್: Nandini ಹಾಲಿನ ದರ ಹೆಚ್ಚಳಕ್ಕೆ ಸಂಪುಟ ಸಮ್ಮತಿ, ಲೀಟರ್‌ಗೆ 8 ರೂ. ಏರಿಕೆ?

ನೈಸ್ ಯೋಜನೆ ನನ್ನ ಕೂಸಾದರೆ, ಸೂಲಗಿತ್ತಿ ಯಾರು? ನನ್ನ ಕಿಡ್ನಿಗೆ ಸಮಸ್ಯೆ ಇರಬಹುದು, ಬ್ರೇನ್‌ಗೆ ಅಲ್ಲ: ಕಾಂಗ್ರೆಸ್ ವಿರುದ್ಧ ಗುಡುಗಿದ ದೇವೇಗೌಡ