ವಿರಾಟ್ ಕೊಹ್ಲಿ 
ಕ್ರಿಕೆಟ್

ಸಿಗದ ಅವಕಾಶ: ಕೊಹ್ಲಿ ವಿರುದ್ಧ ಕಿಡಿಕಾರಿದ ಗೌತಮ್ ಗಂಭೀರ್ ಫ್ಯಾನ್ಸ್

ಸೆಪ್ಟಂಬರ್ 22 ರಿಂದ ಭಾರತ- ನ್ಯೂಜಿಲ್ಯಾಂಡ್ ನಡುವೆ ಕಾನ್ಪುರದಲ್ಲಿ ಮೂರು ಟೆಸ್ಟ್ ಪಂದ್ಯಗಳ ಸರಣಿ ಪ್ರಾರಂಭವಾಗಲಿದೆ. ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ, ...

ನವದೆಹಲಿ: ಸೆಪ್ಟಂಬರ್ 22 ರಿಂದ ಭಾರತ- ನ್ಯೂಜಿಲ್ಯಾಂಡ್ ನಡುವೆ ಕಾನ್ಪುರದಲ್ಲಿ ಮೂರು ಟೆಸ್ಟ್ ಪಂದ್ಯಗಳ ಸರಣಿ ಪ್ರಾರಂಭವಾಗಲಿದೆ. ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ, ಕೋಚ್ ಅನಿಲ್ ಕುಂಬ್ಳೆ ಅವರು ಭಾಗವಹಿಸಿದ್ದ ಆಯ್ಕೆ ಸಮಿತಿಯ ಸಭೆಯಲ್ಲಿ ಭಾರತದ ತಂಡವನ್ನು ಅಂತಿಮಗೊಳಿಸಲಾಗಿದೆ.

ಟೆಸ್ಟ್ ಸರಣಿಗೆ ಭಾರತ ತಂಡವನ್ನು ಪ್ರಕಟಿಸಿರುವ ಬಿಸಿಸಿಐ ಆಯ್ಕೆ ಸಮಿತಿ ಹಾಗೂ ಟೀಂ ಇಂಡಿಯಾ ನಾಯಕ ವಿರಾಟ್‌ ಕೊಹ್ಲಿ, ಗೌತಮ್‌ ಗಂಭೀರ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಟೆಸ್ಟ್ ಸರಣಿಗೆ ಗೌತಮ್ ಗಂಭೀರ್‌ ಅವರನ್ನು ತಂಡಕ್ಕೆ ಆಯ್ಕೆ ಮಾಡಿಲ್ಲ. ಕಳಪೆ ಪ್ರದರ್ಶನ ನೀಡುತ್ತಿರುವ ಶಿಖರ್ ಧವನ್‌ ಅವರನ್ನು ತಂಡದಲ್ಲಿ ಇರಿಸಿಕೊಳ್ಳಲಾಗಿದೆ. ಇದರಿಂದಾಗಿ ಗೌತಮ್ ಗಂಭೀರ್ ಅಭಿಮಾನಿಗಳು ಬಿಸಿಸಿಐ ಆಯ್ಕೆ ಸಮಿತಿ ಮತ್ತು ಕೊಹ್ಲಿ ವಿರುದ್ಧ ಗರಂ ಆಗಿದ್ದಾರೆ.

ಈ ಸಂಬಂಧ ಗೌತಮ್ ಗಂಭೀರ್ ಟ್ವಿಟ್ಟರ್ ನಲ್ಲಿ ಬೇಸರ ವ್ಯಕ್ತ ಪಡಿಸಿದ್ದಾರೆ. ಇದಕ್ಕೆ ಗಂಭೀರ್ ಅಭಿಮಾನಿಗಳು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಸತತ ವೈಫಲ್ಯಎದುರಿಸುತ್ತಿರುವ ಶಿಖರ್‌ ಧವನ್‌ ಮತ್ತು ಮುರಳಿ ವಿಜಯ್ ಅವರ ಸ್ಥಾನಕ್ಕೆ ಗಂಭೀರ್ ಅವರನ್ನು ಆಯ್ಕೆ ಮಾಡಬಹುದಿತ್ತು ಎಂದು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ

SIR ಗೊಂದಲ: ಅಕ್ರಮ ಬಯಲಾಗುವ ಭೀತಿಯಿಂದಲೇ ರಾಜಪಾಲರ ಬಳಿ ಓಡಿದ್ದಾರೆ: NDA ನಾಯಕರ ವಿರುದ್ಧ ಡಿಕೆ.ಶಿವಕುಮಾರ್ ವಾಗ್ದಾಳಿ