ಟೀಂ ಇಂಡಿಯಾ 
ಕ್ರಿಕೆಟ್

ಭಾರತ 500ನೇ ಟೆಸ್ಟ್: ನ್ಯೂಜಿಲೆಂಡ್ ವಿರುದ್ಧ ಮೊದಲ ಇನ್ನಿಂಗ್ಸ್ 318ಕ್ಕೆ ಭಾರತ ಆಲೌಟ್

ಟೀಂ ಇಂಡಿಯಾ ತನ್ನ ಐತಿಹಾಸಿಕ 500ನೇ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧದ ಮೊದಲ ಇನ್ನಿಂಗ್ಸ್ ನಲ್ಲಿ 318 ರನ್ ಗಳಿಗೆ ಆಲೌಟ್ ಆಗಿದೆ...

ಕಾನ್ಪುರ್: ಟೀಂ ಇಂಡಿಯಾ ತನ್ನ ಐತಿಹಾಸಿಕ 500ನೇ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧದ ಮೊದಲ ಇನ್ನಿಂಗ್ಸ್ ನಲ್ಲಿ 318 ರನ್ ಗಳಿಗೆ ಆಲೌಟ್ ಆಗಿದೆ. 
ಗ್ರೀನ್ ಪಾರ್ಕ್ ಮೈದಾನದಲ್ಲಿ ಆರಂಭಗೊಂಡ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಟೀಂ ಇಂಡಿಯಾ ಅರ್ಧ ದಿನದ ವೇಳೆ 1 ವಿಕೆಟ್ ನಷ್ಟಕ್ಕೆ 154 ರನ್ ಗಳಿಸಿ ಸುಸ್ತಿತಿಯಲ್ಲಿತ್ತು. ಬಳಿಕ ನ್ಯೂಜಿಲೆಂಡ್ ಬೌಲರ್ ಗಳು ಪಾರುಪತ್ಯೆ ಮೆರೆದಿದ್ದು 9 ವಿಕೆಟ್ ಗಳನ್ನು ಕಿತ್ತು 318 ರನ್ ಗಳಿಗೆ ತಂಡವನ್ನು ಆಲೌಟ್ ಮಾಡಿದೆ. 
ಮೊದಲ ಇನ್ನಿಂಗ್ಸ್ ಪ್ರಾರಂಭಿಸಿರುವ ನ್ಯೂಜಿಲೆಂಡ್ ಪರ ಆರಂಭಿಕ ಆಟಗಾರರು ಉತ್ತಮ ಪ್ರದರ್ಶನ ನೀಡುತ್ತಿದ್ದು, 35 ಓವರ್ ಮುಕ್ತಾಯಕ್ಕೆ 1 ವಿಕೆಟ್ ಗೆ 123 ರನ್ ಗಳಿಸಿ ಸುಸ್ತಿತಿಯಲ್ಲಿದೆ.
ಪ್ರಥಮ ಇನ್ನಿಂಗ್ಸ್ ನಲ್ಲಿ ಭಾರತ ಪರ ಕೆಎಲ್ ರಾಹುಲ್ 32, ವಿಜಯ್ 65, ಪೂಜಾರ 62, ವಿರಾಟ್ ಕೊಹ್ಲಿ 9, ರಹಾನೆ 18, ರೋಹಿತ್ 35, ಅಶ್ವಿನ್ 40, ರವೀಂದ್ರ ಜಡೇಜಾ 42 ರನ್ ಗಳಿಸಿದ್ದಾರೆ. 
ನ್ಯೂಜಿಲೆಂಡ್ ಪರ ಟ್ರೆಂಟ್ ಬೌಲ್ಟ್, ಸ್ಯಾಂಟ್ನರ್ ತಲಾ 3 ವಿಕೆಟ್, ವ್ಯಾಗ್ನರ್ 2 ವಿಕೆಟ್ ಪಡೆದಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT