ನವದೆಹಲಿ: 18 ಯೋಧರನ್ನು ಬಲಿ ಪಡೆದ ಜಮ್ಮು ಮತ್ತು ಕಾಶ್ಮೀರದ ಉರಿ ಉಗ್ರ ದಾಳಿಯನ್ನು ಖಂಡಿಸಿರುವ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ಅಧ್ಯಕ್ಷ ಅನುರಾಗ್ ಠಾಕೂರ್ ಅವರು, ಪಾಕ್ ಜೊತೆ ಕ್ರಿಕೆಟ್ ಪಂದ್ಯ ಆಯೋಜಿಸುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ.
ಲೋಕಸಭಾ ಸದಸ್ಯರೂ ಆಗಿರುವ ಠಾಕೂರ್, ಭಯೋತ್ಪಾದನೆಗೆ ಪಾಕಿಸ್ತಾನ ಬೆಂಬಲ ನೀಡುತ್ತಿದೆ ಎಂಬುದನ್ನು ತೋರಿಸುವುದಕ್ಕೆ ಮೊದಲ ಆದ್ಯತೆ ನೀಡಲಾಗುವುದು ಎಂದಿದ್ದಾರೆ. ಅಲ್ಲದೆ ಅಂತಹ ರಾಷ್ಟ್ರದೊಂದಿಗೆ ಕ್ರಿಕೆಟ್ ಪಂದ್ಯ ಆಯೋಜಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳುವ ಮೂಲಕ ಭವಿಷ್ಯದಲ್ಲಿ ಉಭಯ ದೇಶಗಳ ನಡುವಿನ ಕ್ರಿಕೆಟ್ ಸಂಬಂಧ ಕಡಿದುಕೊಳ್ಳುವ ಸೂಚನೆ ನೀಡಿದ್ದಾರೆ.
ಕಳೆದ ಭಾನುವಾರ ನಾಲ್ವರು ಉಗ್ರರು ಉರಿ ಸೆಕ್ಟರ್ ನಲ್ಲಿ ದಾಳಿ ನಡೆಸಿದ ಪರಿಣಾಮ 18 ಯೋಧರು ಹುತಾತ್ಮರಾಗಿದ್ದರು. ಅಲ್ಲದೆ ಹಲವು ಯೋಧರು ಗಂಭೀರವಾಗಿ ಗಾಯಗೊಂಡಿದ್ದರು,