ಅಶ್ವಿನ್ ಅತಿವೇಗದಲ್ಲಿ 200 ವಿಕೆಟ್ ಪಡೆದ ವಿಶ್ವದ 2ನೇ ಬೌಲರ್
ಟೆಸ್ಟ್ ಕ್ರಿಕೆಟ್ ನಲ್ಲಿ ಅತೀ ವೇಗವಾಗಿ 200 ವಿಕೆಟ್ ಪಡೆದ ಬೌಲರ್ ಗಳ ಪಟ್ಟಿಯಲ್ಲಿ ಟೀಂ ಇಂಡಿಯಾದ ಸ್ಟಾರ್ ಸ್ಪೀನ್ನರ್ ಆರ್. ಅಶ್ವಿನ್ 2ನೇ ಸ್ಥಾನಪಡೆದಿದ್ದಾರೆ.
ನವದೆಹಲಿ: ಟೆಸ್ಟ್ ಕ್ರಿಕೆಟ್ ನಲ್ಲಿ ಅತೀ ವೇಗವಾಗಿ 200 ವಿಕೆಟ್ ಪಡೆದ ಬೌಲರ್ ಗಳ ಪಟ್ಟಿಯಲ್ಲಿ ಟೀಂ ಇಂಡಿಯಾದ ಸ್ಟಾರ್ ಸ್ಪೀನ್ನರ್ ಆರ್. ಅಶ್ವಿನ್ 2ನೇ ಸ್ಥಾನಪಡೆದಿದ್ದು, ಪಾಕಿಸ್ತಾನದ ವಕಾರ್ ಯೂನಿಸ್ ದಾಖಲೆಯನ್ನು ಸರಿಗಟ್ಟಿದ್ದಾರೆ.
ಭಾರತ-ನ್ಯೂಜಿಲೆಂಡ್ ಟೆಸ್ಟ್ ಸರಣಿ ಮೊದಲ ಪಂದ್ಯದ ಎರಡನೇ ಇನ್ನಿಂಗ್ಸ್ ನಲ್ಲಿ ಅಶ್ವಿನ್ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ ವಿಕೆಟ್ ಪಡೆಯುವ ಮೂಲಕ ಈ ಸಾಧನೆ ಮಾಡಿದ್ದಾರೆ.
ಆಸ್ಟ್ರೇಲಿಯಾದ ಲೆಗ್ ಸ್ಪಿನ್ನರ್ ಕ್ಲಾರಿ ಗ್ರಿಮಿಟ್(36 ಪಂದ್ಯ, 200 ವಿಕೆಟ್) ಮೊದಲ ಸ್ಥಾನದಲ್ಲಿದ್ದರೆ, ಆಸೀಸ್ ಡಲ್ಲಾಸ್ ಲಿಲೀ, ಪಾಕಿಸ್ತಾನದ ವಕಾರ್ ಯೂನಿಸ್(38 ಪಂದ್ಯಗಳಿಂದ 200 ವಿಕೆಟ್) ಜಂಟಿ ದ್ವಿತೀಯ ಸ್ಧಾನದಲ್ಲಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.