ಕೊಲ್ಕತ್ತಾ ಟೆಸ್ಟ್ಗೆ ಗಾಯಾಳು ಕೆಎಲ್ ರಾಹುಲ್ ಬದಲಿಗೆ ಗಂಭೀರ್ ಆಯ್ಕೆ?
ಕಾನ್ಪುರದಲ್ಲಿ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ವೇಳೆ ಗಾಯಗೊಂಡಿರುವ ಕೆಎಲ್ ರಾಹುಲ್ ಕೋಲ್ಕತ್ತಾ ಟೆಸ್ಟ್ ನಲ್ಲಿ ಆಡುವುದು ಡೌಟ್...
ಕೋಲ್ಕತ್ತಾ: ಕಾನ್ಪುರದಲ್ಲಿ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ವೇಳೆ ಗಾಯಗೊಂಡಿರುವ ಕೆಎಲ್ ರಾಹುಲ್ ಕೋಲ್ಕತ್ತಾ ಟೆಸ್ಟ್ ನಲ್ಲಿ ಆಡುವುದು ಡೌಟ್ ಆಗಿರುವುದರಿಂದ ಗೌತಮ್ ಗಂಭೀರ್ ಗೆ ಆಡಲು ಅವಕಾಶ ಸಿಗುವ ಸಾಧ್ಯತೆ ಇದೆ.
ಕೆಎಲ್ ರಾಹುಲ್ ಪ್ರಥಮ ಟೆಸ್ಟ್ ನ ದ್ವಿತೀಯ ಇನ್ನಿಂಗ್ಸ್ ನಲ್ಲಿ ಬ್ಯಾಟಿಂಗ್ ಮಾಡುತ್ತಿದ್ದ ವೇಳೆ ಬಲ ಮೊಣಕಾಲಿನಲ್ಲಿ ನೋವು ಕಾಣಿಸಿಕೊಂಡಿತ್ತು. ಹೀಗಾಗಿ ರಾಹುಲ್ ಬದಲಿಗೆ ಶಿಖರ್ ಧವನ್ ಫೀಲ್ಡಿಂಗ್ ಮಾಡಿದ್ದರು.
ರಾಹುಲ್ ಬದಲಿಗೆ ಉತ್ತಮ ಫಾರ್ಮ್ ನಲ್ಲಿರುವ ಗೌತಮ್ ಗಂಭೀರ್ ಅವರನ್ನು ತಂಡಕ್ಕೆ ಕರೆ ತರುವಲ್ಲಿ ಕೋಚ್ ಅನಿಲ್ ಕುಂಬ್ಳೆ ಆಸಕ್ತಿ ತೋರಿದ್ದಾರೆ ಎಂದು ಮೂಲಗಳು ತಿಳಿಸಿವೆ. ಸೆಪ್ಟೆಂಬರ್ 30 ರಿಂದ ಕೋಲ್ಕತ್ತಾದ ಈಡನ್ ಗಾರ್ಡನ್ ಲ್ಲಿ ಎರಡನೇ ಟೆಸ್ಟ್ ಪಂದ್ಯ ಆರಂಭಗೊಳ್ಳಲಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.