ಬೆಂಗಳೂರು: ಏಪ್ರಿಲ್ 5ರಿಂದ ಚುಟುಕು ಕ್ರಿಕೆಟ್ ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಆರಂಭ ಹಿನ್ನೆಲೆ ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್‌ಸಿಬಿ) ತಂಡವನ್ನು ಸೇರಿಕೊಂಡಿದ್ದಾರೆ.
ಇನ್ನು ಆಸ್ಟ್ರೇಲಿಯಾ ಟೆಸ್ಟ್ ಸರಣಿಯಲ್ಲಿ ಭುಜದ ಗಾಯಕ್ಕೆ ತುತ್ತಾಗಿರುವ ಕೊಹ್ಲಿ ಆರ್ಸಿಬಿ ತಂಡದ ಮೊದಲ ಪಂದ್ಯದಲ್ಲಿ ಭಾಗಿಯಾಗುವ ಸಾಧ್ಯತೆ ಕಡಿಮೆ ಇದೆ. ಸದ್ಯ ತಂಡವನ್ನು ಸೇರಿಕೊಂಡಿರುವ ಕೊಹ್ಲಿ ಈ ಬಗ್ಗೆ ಇನ್ಸ್ಟಾಗ್ರಾಮ್ ನಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದು ಸ್ಫೋಟಕ ಬ್ಯಾಟ್ಸ್ ಮನ್ ಕ್ರಿಸ್ ಗೇಯ್ಲ್ ಮತ್ತು ತಂಡದ ಆಟಗಾರರು ತಮ್ಮನ್ನು ಸ್ವಾಗತಿಸಿರುವುದಾಗಿ ಪೋಸ್ಟ್ ಮಾಡಿದ್ದಾರೆ.
ಐಪಿಎಲ್ ಟೂರ್ನಿಯ 10ನೇ ಆವೃತ್ತಿಯ ಮೊದಲ ಪಂದ್ಯ ಹೈದರಾಬಾದ್ ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ ರೈಸರ್ಸ್ ಹೈದರಾಬಾದ್ ನಡುವೆ ನಡೆಯಲಿದೆ.