ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಇತಿಹಾಸದಲ್ಲಿ ಗರಿಷ್ಠ ರನ್ ಕಲೆಹಾಕಿದ ಬ್ಯಾಟ್ಸ್ ಮನ್ ಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿ ಸುರೇಶ್ ರೈನಾ ಮತ್ತೊಮ್ಮೆ ಅಗ್ರಸ್ಥಾನಕ್ಕೇರಿದ್ದಾರೆ.
ಗುಜರಾತ್ ಲಯನ್ಸ್ ತಂಡದ ನಾಯಕ ಸುರೇಶ್ ರೈನಾ ನಿನ್ನೆ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಸುರೇಶ್ ರೈನಾ 68 ರನ್ ಗಳಿಸುವ ಮೂಲಕ ವಿರಾಟ್ ಕೊಹ್ಲಿಯ ಸಾಧನೆಯನ್ನು ಹಿಂದಿಕ್ಕಿದ್ದಾರೆ. ಕೊಹ್ಲಿ ದಾಖಲೆ ಮುರಿಯಲು ರೈನಾಗೆ ಕೇವಲ 13 ರನ್ ಗಳಷ್ಟೇ ಬೇಕಾಗಿತ್ತು.
ಮೊದಲು ಬ್ಯಾಟ್ ಮಾಡಿದ ಗುಜರಾತ್ ಲಯನ್ಸ್ ಪರ ಸುರೇಶ್ ರೈನಾ ಅಜೇಯ 68 ರನ್ ಗಳಿಸಿದ್ದು 4166 ರನ್ ಗಳೊಂದಿಗೆ ರೈನಾ ಅಗ್ರಸ್ಥಾನದಲ್ಲಿದ್ದಾರೆ. ಇನ್ನು 4110 ರನ್ ಗಳ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ತಂಡದ ನಾಯಕ ವಿರಾಟ್ ಕೊಹ್ಲಿ ದ್ವಿತೀಯ ಸ್ಥಾನದಲ್ಲಿದ್ದಾರೆ.