ಬೆಂಗಳೂರು: ಆಸ್ಟ್ರೇಲಿಯಾ ವಿರುದ್ಧ ತವರಿನಲ್ಲಿ ನಡೆದ ಟೆಸ್ಟ್ ಸರಣಿಯಲ್ಲಿ ಕ್ಷೇತ್ರ ರಕ್ಷಣೆ ವೇಳೆ ಭುಜಕ್ಕೆ ಗಾಯ ಮಾಡಿಕೊಂಡಿರುವ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಚೇತರಿಸಿಕೊಳ್ಳುತ್ತಿದ್ದಾರೆ.
ಐಪಿಎಲ್ ಆರಂಭಿಕ ಪಂದ್ಯಗಳಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಕೊಹ್ಲಿ ಆಡುತ್ತಿಲ್ಲ.
ಇದೆಲ್ಲದರ ನಡುವೆ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ತನ್ನ ಬಾಯ್ ಫ್ರೆಂಡ್ ಕೊಹ್ಲಿ ಆರೋಗ್ಯ ವಿಚಾರಿಸಿಕೊಳ್ಳಲು ಬೆಂಗಳೂರಿಗೆ ಆಗಮಿಸಿದ್ದಾರೆ. ವಿರಾಟ್ ಮತ್ತು ಅನುಷ್ಕಾ ಹೋಟೆಲ್ ನಿಂದ ಹೊರಗಿಳಿಯುವ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ.