ಕ್ರಿಕೆಟ್

ಕೆಕೆಆರ್ ಆಟಗಾರ ಕ್ರಿಸ್ ಲ್ಯಾನ್ ಮುಂದಿನ ಪಂದ್ಯಗಳಿಗೆ ಅಲಭ್ಯ

Vishwanath S
ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಸ್ಫೋಟಕ ಬ್ಯಾಟ್ಸ್ ಮನ್ ಕ್ರಿಸ್ ಲ್ಯಾನ್ ಭುಜದ ಗಾಯಕ್ಕೆ ತುತ್ತಾಗಿದ್ದು ಮುಂದಿನ ಪಂದ್ಯದಲ್ಲಿ ಆಡುವುದು ಅನುಮಾನವಾಗಿದೆ.
ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದ ವೇಳೆ ಫೀಲ್ಡಿಂಗ್ ಮಾಡುವಾಗ ಕ್ರಿಸ್ ಲ್ಯಾನ್ ಭುಜಕ್ಕೆ ಗಾಯ ಮಾಡಿಕೊಂಡಿದ್ದರು. ಇದೀಗ ಭುಜದ ನೋವು ಜಾಸ್ತಿಯಾಗಿರುವುದರಿಂದ ಮುಂದಿನ ಪಂದ್ಯಗಳಲ್ಲಿ ಆಡುವುದು ಅನುಮಾನವಾಗಿದೆ. ಕಳೆದ ಎರಡು ವರ್ಷಗಳಲ್ಲಿ ಕ್ರಿಸ್ ಲ್ಯಾನ್ ಮೂರನೇ ಬಾರಿಗೆ ಭುಜದ ಗಾಯಕ್ಕೆ ತುತ್ತಾಗಿದ್ದಾರೆ. 
ಗುಜರಾತ್ ಲಯನ್ಸ್ ವಿರುದ್ಧದ ಮೊದಲ ಪಂದ್ಯದಲ್ಲಿ ಲ್ಯಾನ್ ಅದ್ಭುತ ಬ್ಯಾಟಿಂಗ್ ಮಾಡಿದ್ದರು. ಮೊದಲ ಪಂದ್ಯದಲ್ಲಿ ಅಜೇಯ 93 ಗಳಿಸಿ ತಂಡಕ್ಕೆ ಜಯ ತಂದುಕೊಟ್ಟಿದ್ದರು. ನಂತರ ಮುಂಬೈ ವಿರುದ್ಧ ನಡೆದ ಎರಡನೇ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಕೆಕೆಆರ್ ಪರ 32 ರನ್ ಸಿಡಿಸಿದ್ದ ಲ್ಯಾನ್ ಅದೇ ಪಂದ್ಯದಲ್ಲಿ ಫೀಲ್ಡಿಂಗ್ ವೇಳೆ ಚೆಂಡನ್ನು ಹಿಡಿಯುವ ಭರದಲ್ಲಿ ಗಾಳಿಯಲ್ಲಿ ಜಿಗಿದಾಗ ಅವರ ಭುಜ ನೆಲಕ್ಕೆ ತಾಗಿತ್ತು.
SCROLL FOR NEXT