ಏ. 14ರ ಮುಂಬೈ ಇಂಡಿಯನ್ಸ್ ವಿರುದ್ಧದ ಪಂದ್ಯದಿಂದ ವಿರಾಟ್ ಕೊಹ್ಲಿ ಕಣಕ್ಕೆ
ಗಾಯದ ಸಮಸ್ಯೆಯಿಂದ ಐಪಿಎಲ್ ನ ಮೊದಲೆರೆಡು ಪಂದ್ಯದಿಂದ ದೂರ ಉಳಿದಿದ್ದ ಸ್ಫೋಟಕ ಬ್ಯಾಟ್ಸ್ ಮನ್ ಎಬಿಡಿ ವಿಲಿಯರ್ಸ್ ತಂಡಕ್ಕೆ ಮರಳಿದ್ದು ಇದೀಗ...
ಬೆಂಗಳೂರು: ಗಾಯದ ಸಮಸ್ಯೆಯಿಂದ ಐಪಿಎಲ್ ನ ಮೊದಲೆರೆಡು ಪಂದ್ಯದಿಂದ ದೂರ ಉಳಿದಿದ್ದ ಸ್ಫೋಟಕ ಬ್ಯಾಟ್ಸ್ ಮನ್ ಎಬಿಡಿ ವಿಲಿಯರ್ಸ್ ತಂಡಕ್ಕೆ ಮರಳಿದ್ದು ಇದೀಗ ಮತ್ತೋರ್ವ ಸ್ಟಾರ್ ಆಟಗಾರ ತಂಡದ ನಾಯಕ ವಿರಾಟ್ ಕೊಹ್ಲಿ ಸಹ ಮುಂಬೈ ವಿರುದ್ಧದ ಪಂದ್ಯದಿಂದ ಕಣಕ್ಕೆ ಇಳಿಯಲಿದ್ದಾರೆ.
ಭುಜದ ಗಾಯದ ಸಮಸ್ಯೆಗೆ ತುತ್ತಾಗಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ತಂಡದ ನಾಯಕ ವಿರಾಟ್ ಕೊಹ್ಲಿ ಐಪಿಎಲ್ 10ನೇ ಆವೃತ್ತಿಯಲ್ಲಿ ಆಡದೇ ಇರುವುದು ಅಭಿಮಾನಿಗಳಿಗೆ ನಿರಾಸೆ ಮೂಡಿಸಿತ್ತು. ಇದೀಗ ಅವರು ಸಂಪೂರ್ಣವಾಗಿ ಚೇತರಿಸಿಕೊಂಡಿದ್ದು ಏಪ್ರಿಲ್ 14ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ನಡೆಯಲಿರುವ ಪಂದ್ಯದ ಮೂಲಕ ಕಣಕ್ಕೆ ಇಳಿಯಲಿದ್ದಾರೆ.
ಈ ಕುರಿತು ಸ್ವತಃ ವಿರಾಟ್ ಕೊಹ್ಲಿ ಸಾಮಾಜಿಕ ತಾಣ ಇನ್ಸ್ಟಾಗ್ರಾಮ್ ನಲ್ಲಿ ಬರೆದುಕೊಂಡಿದ್ದಾರೆ. ಇನ್ನೇನು ತಂಡಕ್ಕೆ ಮರಳುವ ಸನಿಹದಲ್ಲಿದ್ದು ಏ.14ರಂದು ಮೈದಾನಕ್ಕಿಳಿಯಲು ಉತ್ಸುಕನಾಗಿದ್ದೇನೆ ಎಂದು ತಾವು ವೇಟ್ ಲಿಫ್ಟಿಂಗ್ ಮಾಡುತ್ತಿರುವ ಸಣ್ಣ ವಿಡಿಯೋವೊಂದರ ಜತೆ ಅಭಿಮಾನಿಗಳಿಗೆ ಸಂದೇಶ ನೀಡಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.