ಕೊಹ್ಲಿ ಅರ್ಧಶತಕ ವ್ಯರ್ಥ: ಮುಂಬೈ ವಿರುದ್ಧ ಮುಗ್ಗರಿಸಿದ ಆರ್ಸಿಬಿ
ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಭರ್ಜರಿ ಜಯ ಗಳಿಸಿದೆ...
ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ವಿರುದ್ಧದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಭರ್ಜರಿ ಜಯ ಗಳಿಸಿದೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಆರ್ಸಿಬಿ ವಿರುದ್ಧ 4 ವಿಕೆಟ್ ಗಳಿಂದ ಜಯ ಗಳಿಸಿದೆ. ಕೀರನ್ ಪೋಲ್ಲಾರ್ಡ್ ಮತ್ತು ಕೃನಾಲ್ ಪಾಂಡ್ಯ ಅದ್ಭುತ ಬ್ಯಾಟಿಂಗ್ ನೆರವಿನಿಂದ ಮುಂಬೈ ತಂಡ 18.5 ಓವರ್ ನಲ್ಲಿ 145 ರನ್ ಗಳನ್ನು ಸಿಡಿಸುವ ಮೂಲಕ ಗೆಲುವಿನ ನಗೆ ಬೀರಿತು.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ ಪರ ವಿರಾಟ್ ಕೊಹ್ಲಿ ಮತ್ತು ಕ್ರಿಸ್ ಗೇಯ್ಲ್ ಪಂದ್ಯ ಆರಂಭಿಸಿದರು. 22 ರನ್ ಗಳಿಸಿದ್ದ ಕ್ರಿಸ್ ಗೇಯ್ಲ್ ಹಾರ್ದಿಕ್ ಪಾಂಡ್ಯ ಎಸೆತದಲ್ಲಿ ಕೀಪರ್ ಗೆ ಕ್ಯಾಚ್ ನೀಡಿ ನಿರ್ಗಮಿಸಿದರು. ನಂತರ ಅರ್ಧ ಶತಕ ಸಿಡಿಸಿದ್ದ ಕೊಹ್ಲಿ(62) ಮೆಕ್ಲನ್ ಘನ್ ಎಸೆತದಲ್ಲಿ ಬಟ್ಲರ್ ಗೆ ಕ್ಯಾಚ್ ನೀಡಿ ಪೆವಿಲಿಯನ್ ಸೇರಿದರು. ನಂತರ ಬಂದ ಎಬಿಡಿ 19 ರನ್ ಗಳಿಸಿದ್ದೆ ತಂಡ ಅಧಿಕ ಮೊತ್ತವಾಗಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.