ಸಚಿನ್ 44ನೇ ಹುಟ್ಟುಹಬ್ಬಕ್ಕೆ ಗೆಲುವಿನ ಸಿಹಿ ನೀಡುತ್ತಾ ಮುಂಬೈ ಇಂಡಿಯನ್ಸ್
ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಇಂದು ತಮ್ಮ 44ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು ಇಂದು ಪುಣೆ ವಿರುದ್ಧದ ಪಂದ್ಯವನ್ನು ಗೆದ್ದು ಸಚಿನ್ಗೆ ಮುಂಬೈ ಗೆಲುವಿನ...
ಮುಂಬೈ: ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಇಂದು ತಮ್ಮ 44ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು ಇಂದು ಪುಣೆ ವಿರುದ್ಧದ ಪಂದ್ಯವನ್ನು ಗೆದ್ದು ಸಚಿನ್ಗೆ ಮುಂಬೈ ಗೆಲುವಿನ ಉಡುಗೊರೆ ನೀಡುತ್ತಾ ಎಂದುಕಾದು ನೋಡಬೇಕಿದೆ.
ಸಚಿನ್ ಹುಟ್ಟುಹಬ್ಬ ಹಿನ್ನಲೆ ಮುಂಬೈನ ವಾಂಖೆಡೆ ಮೈದಾನದಲ್ಲಿ ಮುಂಬೈ ಇಂಡಿಯನ್ಸ್ ಮಾಜಿ ನಾಯಕ ಸಲಹೆಗಾರ ಸಚಿನ್ ಅವರಿಗಾಗಿ ತಂಡ ವಿಶೇಷ ಕಾರ್ಯಕ್ರಮವೊಂದನ್ನು ಆಯೋಜಿಸಿದೆ.
ಪುಣೆ ಸೂಪರ್ ಜೈಂಟ್ಸ್ ವಿರುದ್ಧದ ಪಂದ್ಯಕ್ಕೂ ಮುನ್ನ ಸಂಭ್ರಮಾಚರಣೆ ನಡೆಯಲಿದ್ದು ಪಂದ್ಯ ವೀಕ್ಷಣೆಗೆ ಸಚಿನ್ ಆಗಮಿಸುವುದಾಗಿ ತಿಳಿಸಿದ್ದಾರೆ. ಸತತ 6 ಗೆಲುವು ಕಂಡಿರುವ ಮುಂಬೈ ಸಚಿನ್ಗೆ ಗೆಲುವಿನ ಉಡುಗೊರೆ ನೀಡಲು ಕಾತರಿಸುತ್ತಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.