ಬೆಂಗಳೂರು: ಮಂಗಳವಾರ ರಾತ್ರಿ ಸುರಿದ ಸತತ ಮಳೆಯಿಂದಾಗಿ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್ ರೈಸರ್ಸ್ ಹೈದರಾಬಾದ್ ತಂಡಗಳ ನಡುವಿನ ಪಂದ್ಯ ರದ್ದಾಗಿದೆ.
ಈಗಾಗಲೇ 8 ಪಂದ್ಯಗಳನ್ನಾಡಿರುವ ವಿರಾಟ್ ಕೊಹ್ಲಿ ಪಡೆ 2 ಪಂದ್ಯಗಳಲ್ಲಿ ಮಾತ್ರ ಗೆಲುವು ಸಾಧಿಸಿದ್ದು, ಸರಣಿಯಲ್ಲಿ ಜೀವಂತವಾಗಿ ಉಳಿದುಕೊಳ್ಳಲು ಮುಂದಿನ ಎಲ್ಲ ಪಂದ್ಯಗಳನ್ನೂ ಗೆಲ್ಲಲೇ ಬೇಕಾದ ಅನಿವಾರ್ಯತೆಗೆ ಸಿಲುಕಿತ್ತು.
ಹೀಗಾಗಿ ಇಂದಿನ ಪಂದ್ಯ ತೀವ್ರ ಕುತೂಹಲ ಕೆರಳಿಸಿತ್ತು. ಆದರೆ ಮಳೆಯಿಂದಾಗಿ ಪಂದ್ಯ ರದ್ದಾಗಿದೆ.