ಬೆಂಗಳೂರು: ಐಪಿಎಲ್ 10ನೇ ಆವೃತ್ತಿಯಲ್ಲೂ ರಾಯಲ್ ಚಾಲೆಂಜರ್ಸ್ ಬೆಂಗಳೂರು(ಆರ್ಸಿಬಿ) ತಂಡ ಪ್ಲೇ-ಆಫ್ ಕನಸು ನುಚ್ಚುನೂರಾಗಿದ್ದು ಈ ಮಧ್ಯೆ ತಂಡದ ನಾಯಕ ವಿರಾಟ್ ಕೊಹ್ಲಿ ಕೇವಲ ಇಬ್ಬರು ಮೂವರು ಆಟಗಾರರಿಂದ ತಂಡವನ್ನು ಗೆಲ್ಲಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗುಜರಾತ್ ಲಯನ್ಸ್ ವಿರುದ್ಧ ನಡೆದ ಮಾಡು ಇಲ್ಲವೆ ಮಡಿ ಪಂದ್ಯದಲ್ಲಿ ಆರ್ಸಿಬಿ 7 ವಿಕೆಟ್ ಗಳಿಂದ ಹೀನಾಯ ಸೋಲು ಕಂಡಿತು. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೊಹ್ಲಿ ಪಂದ್ಯಗಳನ್ನು ಕೈಚೆಲ್ಲುವುದು ಸುಲಭವಲ್ಲ. ಸೋಲನ್ನು ಗೆಲುವಾಗಿ ಪರಿವರ್ತಿಸಿಕೊಳ್ಳಬೇಕಾದರೆ ನಮ್ಮ ತಂಡ ಉತ್ತಮ ಪ್ರದರ್ಶನ ನೀಡಬೇಕು. ಪಂದ್ಯಗಳನ್ನು ಕೇವಲ ಇಬ್ಬರು ಮೂವರು ಆಟಗಾರರು ಮಾತ್ರ ಗೆಲ್ಲಿಸಲು ಸಾಧ್ಯವಿಲ್ಲ. ತಂಡದ ಪ್ರತಿಯೊಬ್ಬ ಆಟಗಾರನು ಉತ್ತಮ ಪ್ರದರ್ಶನ ನೀಡಬೇಕು ಎಂದು ಹೇಳಿದರು.
ಐಪಿಎಲ್ 10ನೇ ಆವೃತ್ತಿಯ ವಿರಾಟ್ ಕೊಹ್ಲಿ ಪಡೆ ಹೀನಾಯ ಸೋಲುಗಳನ್ನು ಕಂಡಿದೆ. ಆಡಿದ 8 ಪಂದ್ಯಗಳ ಪೈಕಿ 2 ಪಂದ್ಯಗಳನ್ನು ಮಾತ್ರ ಗೆದ್ದಿದ್ದು ಆರು ಪಂದ್ಯಗಳಲ್ಲಿ ಹೀನಾಯ ಸೋಲು ಕಂಡಿದೆ. ಇನ್ನು ಒಂದು ಪಂದ್ಯ ಮಳೆಯಿಂದಾಗಿ ರದ್ದಾಗಿದ್ದು 5 ಅಂಕಗಳೊಂದಿಗೆ ಅಂಕಪಟ್ಟಿಯಲ್ಲಿ 7ನೇ ಸ್ಥಾನದಲ್ಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics