ಜಸ್ ಪ್ರೀತ್ ಬೂಮ್ರಾ 
ಕ್ರಿಕೆಟ್

ಮುಂಬೈ-ಗುಜರಾತ್ ಪಂದ್ಯ ಟೈ; ಸೂಪರ್ ಓವರ್ ನಲ್ಲಿ ಗೆದ್ದ ಮುಂಬೈ

ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 10ನೇ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಲಯನ್ಸ್ ಪಂದ್ಯ ಮೊದಲ ಸೂಪರ್ ಓವರ್...

ರಾಜ್ ಕೋಟ್: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 10ನೇ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಗುಜರಾತ್ ಲಯನ್ಸ್ ಪಂದ್ಯ ಮೊದಲ ಸೂಪರ್ ಓವರ್ ಗೆ ಸಾಕ್ಷಿಯಾಯಿತು. ಸೂಪರ್ ಓವರ್ ನಲ್ಲಿ ಜಸ್ ಪ್ರೀತ್ ಬೂಮ್ರಾ ಅದ್ಭುತ ಓವರ್ ನೆರವಿನಿಂದ ಮುಂಬೈ ಗೆಲುವಿನ ನಗೆ ಬೀರಿತು. 
ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಲಯನ್ಸ್ ನಿಗದಿತ ಓವರ್ ನಲ್ಲಿ 9 ವಿಕೆಟ್ ನಷ್ಟಕ್ಕೆ 153 ರನ್ ಗಳಿಸಿತು. ಸಾಧಾರಣ ಮೊತ್ತ ಗುರಿ ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ನಿಗದಿತ ಓವರ್ ನಲ್ಲಿ 153 ರನ್ ಗಳಿಗೆ ಆಲೌಟ್ ಆಯಿತು. ಇದರೊಂದಿಗೆ ಪಂದ್ಯ ಟೈನಲ್ಲಿ ಅಂತ್ಯಗೊಂಡಿತು. ಇದರಿಂದಾಗಿ ಸೂಪರ್ ಓವರ್ ಓವರ್ ಹೋಗಲಾಯಿತು. 
ಮೊದಲು ಸೂಪರ್ ಓವರ್ ಆಡಿದ ಮುಂಬೈ ಇಂಡಿಯನ್ಸ್ ತಂಡ 2 ವಿಕೆಟ್ ಕಳೆದುಕೊಂಡು 11 ರನ್ ಗಳಿಸಿತು. ನಂತರ ಮುಂಬೈ ಪರ ಸೂಪರ್ ಓವರ್ ಮಾಡಿದ ಜಸ್ ಪ್ರೀತ್ ಬೂಮ್ರಾ ಗುಜರಾತ್ ತಂಡವನ್ನು 6 ರನ್ ಗಳಿಗೆ ಕಟ್ಟಿಹಾಕಿದರು. ಇದರೊಂದಿಗೆ ತಂಡಕ್ಕೆ ಜಯ ತಂದುಕೊಟ್ಟರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ