ಡೇವಿಡ್ ವಾರ್ನರ್ 
ಕ್ರಿಕೆಟ್

ಡೇವಿಡ್ ವಾರ್ನರ್ ಅಬ್ಬರಕ್ಕೆ ಕೋಲ್ಕತ್ತಾ ತತ್ತರ

ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 10ನೇ ಆವೃತ್ತಿಯಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದ ನಾಯಕ ಡೇವಿಡ್ ವಾರ್ನರ್ 5ನೇ ವೇಗದ ಶತಕವನ್ನು...

ಹೈದರಾಬಾದ್: ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 10ನೇ ಆವೃತ್ತಿಯಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದ ನಾಯಕ ಡೇವಿಡ್ ವಾರ್ನರ್ 5ನೇ ವೇಗದ ಶತಕವನ್ನು ಸಿಡಿಸಿದ್ದಾರೆ. 
ರಾಜೀವ್ ಗಾಂಧಿ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಹೈದರಾಬಾದ್ ಪರ ಸ್ಫೋಟಕ ಬ್ಯಾಟ್ಸ್ ಮನ್ ಡೇವಿಡ್ ವಾರ್ನರ್ ಶತಕದ ನೆರವಿನೊಂದಿಗೆ ಹೈದರಾಬಾದ್ ತಂಡ 209 ರನ್ ಗಳ ಬೃಹತ್ ಮೊತ್ತ ಕಲೆ ಹಾಕಿತು. 
210 ರನ್ ಗಳ ಬೃಹತ್ ಮೊತ್ತವನ್ನು ಬೆನ್ನಟ್ಟಿದ ಕೋಲ್ಕತ್ತಾ ತಂಡ ನಿಗದಿತ ಓವರ್ ನಲ್ಲಿ 7 ವಿಕೆಟ್ ನಷ್ಟಕ್ಕೆ 161 ರನ್ ಗಳನ್ನು ಗಳಿಸಲಷ್ಟೇ ಶಕ್ತವಾಯಿತು. ಇದರೊಂದಿಗೆ 48 ರನ್ ಗಳಿಂದ ಹೈದರಾಬಾದ್ ತಂಡಕ್ಕೆ ಶರಣಾಯಿತು. 
ಸನ್ ರೈಸರ್ಸ್ ಹೈದರಾಬಾದ್ ಪರ ಡೇವಿಡ್ ವಾರ್ನರ್ 59 ಎಸೆತಗಳಲ್ಲಿ 126 ರನ್ ಗಳಿಸಿದರು. ಶಿಖರ್ ಧವನ್ 29, ವಿಲಿಯಮ್ಸ್ ನ್ 40 ಮತ್ತು ಯುವರಾಜ್ ಸಿಂಗ್ 6 ರನ್ ಗಳಿಸಿದರು. 
ಕೋಲ್ಕತ್ತಾ ಪರ ರಾಬಿನ್ ಉತ್ತಪ್ಪ 53 ಮತ್ತು ಮನೀಷ್ ಪಾಂಡೆ 39 ರನ್ ಬಿಟ್ಟರೆ ಮತ್ಯಾರೂ ಹೇಳಿಕೊಳ್ಳುವಂತಾ ಬ್ಯಾಟಿಂಗ್ ಮಾಡಲಿಲ್ಲ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾಗ್ನಿಜಂಟ್, ಇನ್ಫೋಸಿಸ್, ಟಿಸಿಎಸ್, ವಿಪ್ರೋ ಎಚ್‌ಸಿಎಲ್ ಗೆ ಅಮೆರಿಕ ಶಾಕ್: ಗ್ರೀನ್ ಕಾರ್ಡ್ ಕಾರ್ಯಕ್ರಮದಿಂದ ಅಮಾನತು!

ರಿಯಾದ್ ವಿಮಾನ ನಿಲ್ದಾಣದ ಮೇಲೆ ದಾಳಿ: ರಿಯಾದ್ ಗೆ ತೆರಳಬೇಕಿದ್ದ ಭಾರತೀಯ ವಿಮಾನಗಳು ರದ್ದು

ರಾಜ್‌ಘಟ್‌ನಲ್ಲಿ 'ಇಂಡಿಯಾ' ನಾಯಕರಿಂದ ಧರಣಿ; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡುವವರೆಗೂ 'ವೋಟ್ ಚೋರಿ' ಹೋರಾಟ ಮುಂದುವರಿಸಲು ಪ್ರತಿಜ್ಞೆ!

ಅಂಬಾನಿ ಭಾರತದ ನಿಜವಾದ ಬಾಸ್?: ಭಾರತದಲ್ಲಿ ಸ್ಟಾರ್ ಲಿಂಕ್ ಸೇವೆ ಆರಂಭ ವಿಳಂಬಕ್ಕೆ ಎಲಾನ್ ಮಸ್ಕ್ ಹತಾಶೆ!

SIR ಕಾನೂನುಬದ್ಧ: ಪ್ರತಿಪಕ್ಷಗಳ ಪ್ರತಿಭಟನೆ ನಡುವೆ CEC ಜ್ಞಾನೇಶ್ ಬೆಂಬಲಕ್ಕೆ ನಿಂತ 42 ನಿವೃತ್ತ ನ್ಯಾಯಾಧೀಶರು!