ಕೊಲಂಬೋ: ಶ್ರೀಲಂಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾದ ಆಟಗಾರ ಚೇತೇಶ್ವರ ಪೂಜಾರ ಶತಕ ಸಿಡಿಸಿದ್ದಾರೆ. ಇದೇ ವೇಳೆ ವೇಗವಾಗಿ 4 ಸಾವಿರ ರನ್ ಪೂರೈಸಿದ ಎರಡನೇ ಆಟಗಾರ ಎಂಬ ಖ್ಯಾತಿಗೂ ಭಾಜನರಾಗಿದ್ದಾರೆ.
ಪೂಜಾರ 84 ಇನ್ನಿಂಗ್ಸ್ ನಲ್ಲಿ 4 ಸಾವಿರ ರನ್ ಪೂರೈಸುವ ಮೂಲಕ ಟೀಂ ಇಂಡಿಯಾದ ಗೋಡೆ ಎಂದೇ ಖ್ಯಾತಿ ಗಳಿಸಿರುವ ರಾಹುಲ್ ದ್ರಾವಿಡ್ ಅವರ ದಾಖಲೆಯನ್ನು ಸಮಗಟ್ಟಿದ್ದಾರೆ.
ವೇಗವಾಗಿ ನಾಲ್ಕು ಸಾವಿರ ರನ್ ಪೂರೈಸಿದ ಅಗ್ರ ಆಟಗಾರರ ಸುನೀಲ್ ಗವಾಸ್ಕರ್ ಅವರು 81 ಇನ್ನಿಂಗ್ಸ್ ನಲ್ಲಿ 4 ಸಾವಿರ ರನ್ ಪೂರೈಸಿದರೇ ಟೀಂ ಇಂಡಿಯಾ ಸ್ಫೋಟಕ ಬ್ಯಾಟ್ಸ್ ಮನ್ ವೀರೇಂದ್ರ ಸೆಹ್ವಾಗ್ ಸಹ 81 ಇನ್ನಿಂಗ್ಸ್ ಗಳಲ್ಲಿ 4 ಸಾವಿರ ರನ್ ಪೂರೈಸಿ ಅಗ್ರ ಸ್ಥಾನದಲ್ಲಿದ್ದಾರೆ. ಇನ್ನು ಕನ್ನಡಿಗ ರಾಹುಲ್ ದ್ರಾವಿಡ್ 84 ಇನ್ನಿಂಗ್ಸ್ ಗಳಲ್ಲಿ 4 ಸಾವಿರ ರನ್ ಗಡಿ ದಾಟಿದ್ದರು.
ಇನ್ನು ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್(86), ಮೊಹಮ್ಮದ್ ಅಜರುದ್ದೀನ್(88) ಮತ್ತು ವಿರಾಟ್ ಕೊಹ್ಲಿ 89 ಇನ್ನಿಂಗ್ಸ್ ಗಳಲ್ಲಿ 4 ಸಾವಿರ ರನ್ ಗಡಿ ದಾಟಿದ್ದರು.
ಇನ್ನು ಶ್ರೀಲಂಕಾ ವಿರುದ್ಧ ಗಾಲೆಯಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಚೇತೇಶ್ವರ ಪೂಜಾರ ಅವರು 265 ಎಸೆತಗಳಲ್ಲಿ 153 ರನ್ ಸಿಡಿಸಿ ಶತಕ ಪೂರೈಸಿದ್ದರು. ಇದರೊಂದಿಗೆ ಪೂಜಾರ ಶ್ರೀಲಂಕಾ ವಿರುದ್ಧದ ಎರಡು ಟೆಸ್ಟ್ ಪಂದ್ಯಗಳಲ್ಲಿ ಶತಕ ಸಿಡಿಸಿದ ಸಾಧನೆ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics