ಟೀಂ ಇಂಡಿಯಾ ಆಲ್ ರೌಂಡರ್ ರವಿಚಂದ್ರನ್ ಅಶ್ವಿನ್ ಬ್ಯಾಟಿಂಗ್ ನಲ್ಲಿ ವಿಶ್ವ ದಾಖಲೆಯೊಂದನ್ನು ಬರೆದಿದ್ದಾರೆ.
ಆರ್ ಅಶ್ವಿನ್ ವೇಗಿವಾಗಿ 2000 ರನ್ ಪೂರೈಸಿದ ಆಲ್ ರೌಂಡರ್ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ. ಇನ್ನು ಬೌಲಿಂಗ್ ನಲ್ಲಿ ವೇಗವಾಗಿ 250 ವಿಕೆಟ್ ಗಳನ್ನು ಪಡೆದ ಸಾಧನೆ ಮಾಡಿರುವ ಅವರು ವೇಗವಾಗಿ 300 ವಿಕೆಟ್ ಪಡೆದ ಸಾಧನೆ ಮಾಡಲಿದ್ದಾರೆ.
ಬೌಲಿಂಗ್ ಮತ್ತು ಬ್ಯಾಟಿಂಗ್ ನಲ್ಲಿ ಮಿಂಚುತ್ತಿರುವ ಆರ್ ಅಶ್ವಿನ್ ಶ್ರೀಲಂಕಾ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ 54 ರನ್ ಸಿಡಿಸುವ ಮೂಲಕ 2000 ರನ್ ಪೂರೈಸಿದರು. ಇನ್ನು ಈ ಸಾಧನೆ ಮಾಡಿದ ಭಾರತೀಯ ಕ್ರಿಕೆಟಿಗರ ಪೈಕಿ ಆರ್ ಅಶ್ವಿನ್ ನಾಲ್ಕನೇ ಸ್ಥಾನದಲ್ಲಿದ್ದಾರೆ. ಕಪಿಲ್ ದೇವ್, ಹರ್ಭಜನ್ ಸಿಂಗ್ ಮತ್ತು ಅನಿಲ್ ಕುಂಬ್ಳೆ ಈ ಸಾಧನೆ ಮಾಡಿದ್ದಾರೆ.