ಕಾಂಡಿ: ಶ್ರೀಲಂಕಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ ಆಟಗಾರ ಶಿಖರ್ ಧವನ್ ಶತಕ ಸಿಡಿಸಿದ್ದಾರೆ.
ಪಲ್ಲೆಕಿಲೆ ಮೈದಾನದಲ್ಲಿ ನಡೆಯುತ್ತಿರುವ ಮೂರನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿತು. ಇದರೊಂದಿಗೆ ಆರಂಭಿಕರಾಗಿ ಕಣಕ್ಕಿಳಿದ ಶಿಖರ್ ಧವನ್ ಹಾಗೂ ಕೆಎಲ್ ರಾಹುಲ್ ಜೋಡಿ 188 ರನ್ ಗಳ ಭರ್ಜರಿ ಜತೆಯಾಟ ನೀಡಿತು.
ಉತ್ತಮವಾಗಿ ಆಡುತ್ತಿದ್ದ ಕೆಎಲ್ ರಾಹುಲ್ 85 ರನ್ ಗಳಿಸಿದ್ದಾಗ ಪುಷ್ಪಕುಮಾರ್ ಎಸೆತದಲ್ಲಿ ಕರುಣರತ್ನೆಗೆ ಕ್ಯಾಚ್ ನೀಡಿ ನಿರ್ಗಮಿಸಿದರು. ಶಿಖರ್ ಧವನ್ ಅಜೇಯ 109 ರನ್ ಗಳಿಸಿ ಆಟವಾಡುತ್ತಿದ್ದು ಚೇತೇಶ್ವರ ಪೂಜಾರ ಅಜೇಯ 2 ರನ್ ಗಳಿಸಿದ್ದಾರೆ. ಸದ್ಯ ಟೀಂ ಇಂಡಿಯಾ 44 ಓವರ್ ಮುಕ್ತಾಯಕ್ಕೆ 1 ವಿಕೆಟ್ ನಷ್ಟಕ್ಕೆ 204 ರನ್ ಗಳಿಸಿದೆ.
ಶ್ರೀಲಂಕಾ ವಿರುದ್ಧದ ಮೂರು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಭಾರತ ಅದಾಗಲೇ 2 ಪಂದ್ಯಗಳನ್ನು ಗೆದ್ದು ಸರಣಿ ಕೈವಶ ಮಾಡಿಕೊಂಡಿದೆ. ಇನ್ನು ಮೂರನೇ ಟೆಸ್ಟ್ ಪಂದ್ಯ ಭಾರತ ಗೆದ್ದರೆ ವಿದೇಶಿ ನೆಲದಲ್ಲಿ 82 ವರ್ಷಗಳ ತನ್ನ ಟೆಸ್ಟ್ ಇತಿಹಾಸದಲ್ಲಿ ಮೊಟ್ಟ ಮೊದಲ ಕ್ಲೀನ್ ಸ್ವೀಪ್ ಸಾಧನೆ ಮಾಡಲಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics