ನವದೆಹಲಿ: ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಅದ್ಭುತ ಪ್ರದರ್ಶನ ನೀಡಿದ ಕೆಎಲ್ ರಾಹುಲ್ ಹಾಗೂ ಶಿಖರ್ ಧವನ್ ಅವರು ಐಸಿಸಿ ಟೆಸ್ಟ್ ಕ್ರಿಕೆಟ್ ರ್ಯಾಂಕಿಂಗ್ ನಲ್ಲಿ ಬಡ್ತಿ ಪಡೆದಿದ್ದಾರೆ.
ಐಸಿಸಿ ಟೆಸ್ಟ್ ರ್ಯಾಂಕಿಂಗ್ ನಲ್ಲಿ ಕೆಎಲ್ ರಾಹುಲ್ ಎರಡು ಸ್ಥಾನ ಬಡ್ತಿ ಪಡೆದು ಟಾಪ್ 9ನೇ ಸ್ಥಾನದಲ್ಲಿದ್ದಾರೆ. ಇನ್ನು ಶಿಖರ್ ಧವನ್ 10 ಸ್ಥಾನ ಮೇಲಕ್ಕೇರಿ 28ನೇ ಸ್ಥಾನ ಗಿಟ್ಟಿಸಿಕೊಂಡು ತಮ್ಮು ಕ್ರಿಕೆಟ್ ಜೀವನದಲ್ಲಿ ಅದ್ಭುತ ಸಾಧನೆ ಮಾಡಿದ್ದಾರೆ.
ಶ್ರೀಲಂಕಾ ವಿರುದ್ಧದ ಮೂರು ಟೆಸ್ಟ್ ಪಂದ್ಯಗಳಲ್ಲಿ ಶಿಖರ್ ಧವನ್ 358 ರನ್ ಗಳಿಸಿ ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದಿದ್ದಾರೆ.
ಇನ್ನು ಬೌಲಿಂಗ್ ವಿಭಾಗದಲ್ಲಿ ರವೀಂದ್ರ ಜಡೇಜಾ ನಂಬರ್ 1 ಸ್ಥಾನವನ್ನು ಕಾಯ್ದುಕೊಂಡಿದ್ದಾರೆ. ಆದರೆ ಆಲ್ ರೌಂಡರ್ ವಿಭಾಗದಲ್ಲಿ ಜಡೇಜಾ ನಂಬರ್ ಸ್ಥಾನವನ್ನು ಕಳೆದುಕೊಂಡಿದ್ದಾರೆ. ಜಡೇಜಾರಿಗಿಂತ ಎರಡು ಅಂಕಗಳು ಮುನ್ನಡೆಯೊಂದಿಗೆ ಬಾಂಗ್ಲಾದೇಶದ ಶಕೀಬ್ ಅಲ್ ಹಸನ್ ನಂಬರ್ 1 ಸ್ಥಾನ ಅಲಂಕರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics