ಗೆಲುವಿನ ಜೊತೆಯಾಟವಾಡಿದ ಧವನ್-ಕೊಹ್ಲಿ ಜೋಡಿ 
ಕ್ರಿಕೆಟ್

ಮೊದಲ ಏಕದಿನ ಪಂದ್ಯ: ಶ್ರೀಲಂಕಾ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ಶ್ರೀಲಂಕಾದ ಡಂಬುಲಾದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಪ್ರವಾಸಿ ಭಾರತ ತಂಡ ಅತಿಥೇಯ ಶ್ರೀಲಂಕಾ ವಿರುದ್ಧ ಭರ್ಜರಿ ಜಯ ಸಾಧಿಸಿದೆ.

ಡಂಬುಲಾ: ಶ್ರೀಲಂಕಾದ ಡಂಬುಲಾದಲ್ಲಿ ನಡೆದ ಮೊದಲ ಏಕದಿನ ಪಂದ್ಯದಲ್ಲಿ ಪ್ರವಾಸಿ ಭಾರತ ತಂಡ ಅತಿಥೇಯ ಶ್ರೀಲಂಕಾ ವಿರುದ್ಧ ಭರ್ಜರಿ ಜಯ ಸಾಧಿಸಿದೆ.

ಶ್ರೀಲಂಕಾ ನೀಡಿದ 217 ರನ್ ಗಳ ಸಾಧಾರಣ ಮೊತ್ತವನ್ನು ಬೆನ್ನು ಹತ್ತಿದ ಭಾರತ ತಂಡ ಆರಂಭಿಕ ಆಟಗಾರ ಶಿಖರ್ ಧವನ್ ಭರ್ಜರಿ ಶತಕ ಹಾಗೂ ನಾಯಕ ವಿರಾಟ್ ಕೊಹ್ಲಿ ಅವರ ಅರ್ಧಶತಕದ ಸಮಯೋಚಿತ ಆಟದ  ನೆರವಿನಿಂದ ಯಶಸ್ವಿಯಾಗಿ ಗುರಿ ಮುಟ್ಟಿ ಜಯ ಸಾಧಿಸಿದೆ. ಲಂಕಾ ನೀಡಿದ 217 ರನ್ ಗಳ ಗುರಿ ಬೆನ್ನು ಹತ್ತಿದ ಭಾರತಕ್ಕೆ ಆರಂಭಿಕ ಆಘಾತ ಎದುರಾಯಿತು.ತಂಡದ ಮೊತ್ತ 23 ರನ್ ಗಳಾಗಿದ್ದಾಗ ಕೇವಲ 4 ರನ್ ಗಳಿಸಿದ್ದ ಆರಂಭಿಕ  ಆಟಗಾರ ರೋಹಿತ್ ಶರ್ಮಾ ಇನ್ನಿಲ್ಲದ ರನ್ ಕದಿಯಲು ಹೋಗಿ ರನ್ ಔಟ್ ಗೆ ಬಲಿಯಾದರು.

ಬಳಿಕ ಧವನ್ ಜೊತೆಗೂಡಿದ ವಿರಾಟ್ ಕೊಹ್ಲಿ ತಂಡಕ್ಕೆ ಯಾವುದೇ ಆಘಾತ ಎದುರಾಗದಂತೆ ನೋಡಿಕೊಂಡರು. ಬೌಂಡರಿ ಮತ್ತು ಆಕರ್ಷಕ ಸಿಕ್ಸರ್ ಗಳ ಮೂಲಕ ಪ್ರೇಕ್ಷಕರನ್ನು ರಂಜಿಸಿದ ಈ ಜೋಡಿ ನೋಡ  ನೋಡುತ್ತಿದ್ದಂತೆಯೇ ಶತಕದ ಜೊತೆಯಾಟವಾಡಿದರು. ಉತ್ತಮ ಫಾರ್ಮ್ ನಲ್ಲಿರುವ ಶಿಖರ್ ಧವನ್ ಕೇವಲ 71 ಎಸೆತಗಳಲ್ಲಿ ಶತಕ ಸಿಡಿಸಿ ಸಂಭ್ರಮಿಸಿದರು. ಇದು ಅವರ ವೃತ್ತಿ ಜೀವನದ 11 ಅಂತಾರಾಷ್ಟ್ರೀಯ ಶತಕವಾಗಿದೆ.

ಇದಕ್ಕೂ ಮೊದಲು ಕೊಹ್ಲಿ ಕೂಡ ಆಕರ್ಷಕ ಅರ್ಧಶತಕ ಸಿಡಿಸಿದರು. ಕೊಹ್ಲಿ ಪಾಲಿಗೆ ಇದು 44ನೇ ಅಂತಾರಾಷ್ಟ್ರೀಯ ಅರ್ಧಶತಕವಾಗಿದೆ. ಅಂತಿಮವಾಗಿ ಭಾರತ 28.5 ಓವರ್ ಗಳಲ್ಲಿ ಕೇವಲ 1 ವಿಕೆಟ್ ಕಳೆದುಕೊಂಡು 220 ರನ್ ಸಿಡಿಸಿ 9 ವಿಕೆಟ್ ಗಳ ಭರ್ಜರಿ ಗೆಲುವಿನ ನಗೆ ಬೀರಿತು. ಆ ಮೂಲಕ 5 ಪಂದ್ಯಗಳ ಸರಣಿಯಲ್ಲಿ ಭಾರತ 1-0 ಅಂತರದ ಮುನ್ನಡೆ ಸಾಧಿಸಿದೆ.

ಟಾಸ್ ಗೆದ್ದು ಶ್ರೀಲಂಕಾಗೆ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ನೀಡಿದ ಭಾರತ ತಂಡ ತರಂಗಾ ಪಡೆಯನ್ನು ಕೇವಲ 216ರನ್ ಗಳಿಗೆ ಕಟ್ಟಿಹಾಕಿತು. ಭಾರತದ ಅಕ್ಷರ್ ಪಟೇಲ್ ಲಂಕಾ ದಾಂಡಿಗರ ಮೇಲೆ ಸವಾರಿ ಮಾಡುವ  ಮೂಲಕ ಶ್ರೀಲಂಕಾ ಅಲ್ಪ ಮೊತ್ತಕ್ಕೆ ಆಲ್ ಔಟ್ ಆಗುವಂತೆ ಮಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?