ಕ್ರಿಕ್ ಬಝ್ ಚಿತ್ರ 
ಕ್ರಿಕೆಟ್

4ನೇ ಏಕದಿನ ಪಂದ್ಯ: ಶ್ರೀಲಂಕಾ ವಿರುದ್ಧ ಭಾರತಕ್ಕೆ 168 ರನ್ ಗಳ ಭರ್ಜರಿ ಜಯ

ಶ್ರೀಲಂಕಾ ವಿರುದ್ಧ ಕೊಲಂಬೋದಲ್ಲಿ ನಡೆದ ನಾಲ್ಕನೇ ಏಕದಿನ ಪಂದ್ಯದಲ್ಲೂ ಭಾರತ ತಂಡ 168 ರನ್ ಗಳ ಭರ್ಜರಿ ಜಯ ಸಾಧಿಸಿದೆ.

ಕೊಲಂಬೋ: ಶ್ರೀಲಂಕಾ ವಿರುದ್ಧ ಕೊಲಂಬೋದಲ್ಲಿ ನಡೆದ ನಾಲ್ಕನೇ ಏಕದಿನ ಪಂದ್ಯದಲ್ಲೂ ಭಾರತ ತಂಡ 168 ರನ್  ಗಳ ಭರ್ಜರಿ ಜಯ ಸಾಧಿಸಿದೆ.
ಭಾರತ ನೀಡಿದ 376 ರನ್ ಗಳ ಬೃಹತ್ ಗುರಿಯನ್ನು ಬೆನ್ನು ಹತ್ತಿದ ಶ್ರೀಲಂಕಾ ತಂಡ 42.4 ಓವರ್ ಗಳಲ್ಲಿಯೇ ಕೇವಲ  207 ರನ್ ಗಳಿಸಿ ಆಲ್ ಔಟ್ ಆಯಿತು. ಆ ಮೂಲಕ ಭಾರತದ ಎದುರು 168 ರನ್ ಗಳ ಅಂತರದಿಂದ ಮತ್ತೆ  ಶರಣಾಯಿತು.
ಶ್ರೀಲಂಕಾ ಪರ ಎಂಜಲೋ ಮ್ಯಾಥ್ಯೂಸ್ (70 ರನ್) ಮತ್ತು ಮಿಲಿಂಡಾ ಸಿರಿವರ್ಧನಾ (39 ರನ್) ಅವರನ್ನು ಹೊರತು  ಪಡಿಸಿದರೆ, ಇತರೆ ಬ್ಯಾಟ್ಸಮನ್ ಗಳಿಂದ ಅಂತಹ ಪ್ರಭಾವಿ ಬ್ಯಾಟಿಂಗ್ ಪ್ರದರ್ಶನ ಮೂಡಿ ಬರಲಿಲ್ಲ. ಭಾರತೀಯ  ಬೌಲರ್ ಗಳ ಸಾಂಘಿಕ ಹೋರಾಟದ ಎದುರ ಲಂಕಾ ಬ್ಯಾಟಿಂಗ್ ಪಡೆ ಕಳೆಗುಂದಿದಂತೆ ಕಂಡಿತು. 
ಭಾರತೀಯ ವೇಗದ ಬೌಲರ್ ಗಳು ಶ್ರೀಲಂಕಾದ ರನ್ ವೇಗಕ್ಕೆ ಕಡಿವಾಣ ಹಾಕಿದ್ದಲ್ಲದೇ ಕ್ರಮೇಣ ವಿಕೆಟ್  ಕಬಳಿಸುವುದರೊಂದಿಗೆ ಶ್ರೀಲಂಕಾ ಪಡೆ ಮೇಲೆ ಒತ್ತಡ ಹೇರಿದರು. ಅಂತಿಮವಾಗಿ ಶ್ರೀಲಂಕಾ ತಂಡ 42.4 ಓವರ್  ಗಳಲ್ಲಿ 207 ರನ್ ಗಳಿಸಿ ತನ್ನೆಲ್ಲಾ ವಿಕೆಟ್ ಒಪ್ಪಿಸಿತು. ಆ ಮೂಲಕ ಭಾರತದ ಎದುರು 168 ರನ್ ಗಳ ಬೃಹತ್ ಅಂತರದ  ಸೋಲು ಕಂಡಿತು.
ಆಕರ್ಷಕ ಶತಕ ಸಿಡಿಸಿ ತಂಡದ ಬೃಹತ್ ಮೊತ್ತಕ್ಕೆ ಕಾರಣರಾದ ನಾಯಕ ವಿರಾಟ್ ಕೊಹ್ಲಿ ಅರ್ಹವಾಗಿಯೇ ಪಂದ್ಯಶ್ರೇಷ್ಠ  ಪ್ರಶಸ್ತಿಗೆ ಭಾಜನರಾದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!