ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಕ್ರಿಕೆಟ್

189 ಏಕದಿನ ಪಂದ್ಯಗಳಲ್ಲಿ 29 ಶತಕ ಸಿಡಿಸಿದ ಮೊದಲ ಆಟಗಾರ ವಿರಾಟ್ ಕೊಹ್ಲಿ!

ಶ್ರೀಲಂಕಾ ವಿರುದ್ಧದ ನಾಲ್ಕನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಭರ್ಜರಿ ಶತಕ ಸಿಡಿಸಿದ್ದಾರೆ...

ವಿರಾಟ್ ಕೊಹ್ಲಿ
Vishwanath S
Updated On : 31 Aug 2017, 11:12 am
ಕೊಲಂಬೋ: ಶ್ರೀಲಂಕಾ ವಿರುದ್ಧದ ನಾಲ್ಕನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಭರ್ಜರಿ ಶತಕ ಸಿಡಿಸಿದ್ದಾರೆ. 
ಕೊಲಂಬೋದ ಆರ್ ಪ್ರೇಮದಾಸ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ವಿರಾಟ್ ಕೊಹ್ಲಿ 76 ಎಸೆತಗಳಲ್ಲಿ 14 ಬೌಂಡರಿ, 1 ಸಿಕ್ಸರ್ ಸೇರಿದಂತೆ 100 ರನ್ ಗಳಿಸಿದ್ದಾರೆ. 
ಅಂತಾರಾಷ್ಟ್ರೀಯ ಏಕದಿನ ಪಂದ್ಯದಲ್ಲಿ 29ನೇ ಶತಕ ಇದಾಗಿದೆ. ಇನ್ನು ವೇಗವಾಗಿ 29ನೇ ಶತಕ ಸಿಡಿಸಿದ ಖ್ಯಾತಿಗೆ ಕೊಹ್ಲಿ ಭಾಜನರಾಗಿದ್ದಾರೆ. 

Advertisement

Advertisement

ಕ್ರಿಕೆಟ್ ದಿಗ್ಗಜ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ಅವರು 463 ಪಂದ್ಯಗಳಲ್ಲಿ 49 ಶತಕ ಸಿಡಿಸಿ ಅಗ್ರಸ್ಥಾನದಲ್ಲಿದ್ದಾರೆ. ಇನ್ನು ಆಸ್ಟ್ರೇಲಿಯಾ ಮಾಜಿ ನಾಯಕ ರಿಕಿ ಪಾಂಟಿಂಗ್ 375 ಪಂದ್ಯಗಳಲ್ಲಿ 30 ಶತಕ ಸಿಡಿಸಿ ಎರಡನೇ ಸ್ಥಾನದಲ್ಲಿದ್ದಾರೆ. ವಿರಾಟ್ ಕೊಹ್ಲಿ 189ನೇ ಪಂದ್ಯದಲ್ಲೇ 29ನೇ ಶತಕ ಸಿಡಿಸುವ ಮೂಲಕ ಕಡಿಮೆ ಇನ್ನಿಂಗ್ಸ್ ನಲ್ಲಿ ವೇಗವಾಗಿ ಶತಕ ಸಿಡಿಸಿದ ಮೊದಲ ಆಟಗಾರ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement