ಟೀಂ ಇಂಡಿಯಾ 
ಕ್ರಿಕೆಟ್

3ನೇ ಟೆಸ್ಟ್ ಪಂದ್ಯ: ಲಂಕಾ ವಿರುದ್ಧ ಮೊದಲ ದಿನದಾಟಕ್ಕೆ ಭಾರತ 371/4

ಪ್ರವಾಸಿ ಶ್ರೀಲಂಕಾ ವಿರುದ್ಧದ 3ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 4 ವಿಕೆಟ್ ನಷ್ಟಕ್ಕೆ 371 ರನ್ ಪೇರಿಸಿದೆ...

ನವದೆಹಲಿ: ಪ್ರವಾಸಿ ಶ್ರೀಲಂಕಾ ವಿರುದ್ಧದ 3ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾ 4 ವಿಕೆಟ್ ನಷ್ಟಕ್ಕೆ 371 ರನ್ ಪೇರಿಸಿದೆ. 
ಫಿರೋಜ್ ಶಾ ಕೊಟ್ಲಾ ಮೈದಾನದಲ್ಲಿ ನಡೆಯುತ್ತಿರುವ ಅಂತಿಮ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಮೊದಲ ದಿನದ ಅಂತ್ಯಕ್ಕೆ 4 ವಿಕೆಟ್ ನಷ್ಟಕ್ಕೆ 371 ರನ್ ಪೇರಿಸಿದೆ. ಆರಂಭಿಕರಾಗಿ ಕಣಕ್ಕಿಳಿದ ಶಿಖರ್ ಧವನ್ 23 ಹಾಗೂ ಚೇತೇಶ್ವರ ಪೂಜಾರ ಸಹ 23 ರನ್ ಗಳಿಗೆ ಔಟ್ ಆದರು ನಂತರ ಒಂದಾದ ಮುರಳಿ ವಿಜಯ್ ಜೋಡಿ 283 ರನ್ ಜತೆಯಾಟ ನೀಡಿದ್ದು ಟೀಂ ಇಂಡಿಯಾ ಬೃಹತ್ ರನ್ ಕಲೆ ಹಾಕಲು ಸಾಧ್ಯವಾಯಿತು. 
ಮುರಳಿ ವಿಜಯ್ ಭರ್ಜರಿ 155 ರನ್ ಸಿಡಿಸಿ ಔಟಾದರೆ ಅಂಜಿಕ್ಯ ರಹಾನೆ 1 ರನ್ ಗಳಿಸಿ ಪೆವಿಲಿಯನ್ ಸೇರಿದರು. ಸದ್ಯ 156 ರನ್ ಗಳಿಸಿರುವ ವಿರಾಟ್ ಕೊಹ್ಲಿ ಹಾಗೂ 6 ರನ್ ಗಳಿಸಿರುವ ರೋಹಿತ್ ಶರ್ಮಾ ಎರಡನೇ ದಿನದಾಟವನ್ನು ಪ್ರಾರಂಭಿಸಲಿದ್ದಾರೆ. 
ಶ್ರೀಲಂಕಾ ಪರ ಸಂದಕನ್ 2, ಪೆರೇರಾ ಹಾಗೂ ಘಮಗೆ ತಲಾ 1 ವಿಕೆಟ್ ಪಡೆದಿದ್ದಾರೆ. 
ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ 1-0 ಅಂತರದಲ್ಲಿ ಮುನ್ನಡೆ ಸಾಧಿಸಿದೆ. ಈ ಪಂದ್ಯ ಗೆದ್ದರೂ, ಡ್ರಾ ಆದರೂ ಟೀಂ ಇಂಡಿಯಾಗೆ ಸರಣಿ ಕೈವಶವಾಗಲಿದೆ.  

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀವೂ ಪ್ರಧಾನಿ ಮೋದಿಯಂತೆಯೇ ದಬ್ಬಾಳಿಕೆದಾರರು, ಧೈರ್ಯವಿದ್ದರೆ 'ನಿಮ್ಮ ಆ ಚಿಕ್ಕ ಶಾಲು' ಧರಿಸಿ ಹೊರ ಬಂದು ನೋಡಿ: BJP-RSSಗೆ ರಾಹುಲ್ ಗಾಂಧಿ ಸವಾಲು

ಕಾವೇರಿ ಕಗ್ಗಂಟು: "ಕುಡಿಯಲು ನಮಗೇ ನೀರಿಲ್ಲ, ತಮಿಳುನಾಡಿಗೆ ಕೊಡೋದು ಹೇಗೆ..?" ಸುಪ್ರೀಂ ಕೋರ್ಟ್‌ನಲ್ಲಿ ಕರ್ನಾಟಕ ವಾದ..!

5 ರಾಜ್ಯಗಳಿಗೆ ರಾಜ್ಯಪಾಲರ ನೇಮಕ; ಇವರೇ ಕರ್ನಾಟಕದ ನೂತನ ರಾಜ್ಯಪಾಲರು...

ವಿಡಿಯೋ ಪ್ರಸಾರ ಮಾಡದಂತೆ ತಡೆಯಾಜ್ಞೆ ಕೋರಿ ಕೋರ್ಟ್ ಮೆಟ್ಟಿಲೇರಿದ ಮಾಜಿ ಮುಖ್ಯಮಂತ್ರಿ!

ಸ್ಯಾಂಡಲ್‌ವುಡ್‌ನಲ್ಲಿ ಮತ್ತೊಂದು ವಿಚ್ಛೇದನ: 7 ವರ್ಷದ ದಾಂಪತ್ಯಕ್ಕೆ ಅಂತ್ಯವಾಡಿದ ಕನ್ನಡದ ಕಿರುತೆರೆ ನಟಿ!