ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಪ್ರವಾಸಿ ಶ್ರೀಲಂಕಾ ವಿರುದ್ಧದ ಟಿ20 ಸರಣಿಗೆ ಭಾರತ ತಂಡವನ್ನು ಪ್ರಕಟಿಸಿದ್ದು, ನಾಯಕ ವಿರಾಟ್ ಕೊಹ್ಲಿ ಅವರಿಗೆ ವಿಶ್ರಾಂತಿ ನೀಡಲಾಗಿದೆ.
ಲಂಕಾ ವಿರುದ್ಧದ ಟಿ20ಗೆ ರೋಹಿತ್ ಶರ್ಮಾ ನಾಯಕರಾಗಿದ್ದು, ಕೆಎಲ್ ರಾಹುಲ್, ಶ್ರೇಯಸ್ ಐಯ್ಯರ್, ಮನಿಷ್ ಪಾಂಡೆ, ದಿನೇಶ್ ಕಾರ್ತಿಕ್, ಎಂಎಸ್ ಧೋನಿ, ಹಾರ್ದಿಕ್ ಪಾಂಡೆ, ವಾಷಿಂಗ್ಟನ್ ಸುಂದರ್, ಯಜ್ವೇಂದ್ರ ಚಹಲ್, ಕುಲದೀಪ್ ಯಾದವ್, ದೀಪಕ್ ಹೂಡಾ, ಜಸ್ಪ್ರಿತ್ ಬುಮ್ರಾ, ಮೊಹಮ್ಮದ್ ಸಿರಾಜ್, ಬೆಸಿಲ್ ತಂಪಿ, ಜಯದೇವ್ ಉನದ್ಕಟ್ ಅವರು ಸ್ಥಾನ ಪಡೆದಿದ್ದಾರೆ.
ಬಿಸಿಸಿಐ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಗೂ ಭಾರತ ತಂಡವನ್ನು ಪ್ರಕಟಿಸಿದ್ದು, ವಿರಾಟ್ ಕೊಹ್ಲಿ(ನಾಯಕ), ಕೆಎಲ್ ರಾಹುಲ್, ಮುರಳಿ ವಿಜಯ್, ಶಿಖರ್ ಧವನ್, ಚೇತೇಶ್ವರ್ ಪೂಜಾರಾ, ಅಜಿಂಕ್ಯಾ ರಹಾನೆ (ಉಪ ನಾಯಕ), ರೋಹಿತ್ ಶರ್ಮಾ, ವೃದ್ಧಿಮಾನ್ ಸಹಾ, ಆರ್ ಅಶ್ವಿನ್, ರವೀಂದ್ರ ಜಡೇಜಾ, ಹಾರ್ದಿಕ್ ಪಾಂಡ್ಯಾ, ಮೊಹಮ್ಮದ್ ಶಮಿ, ಉಮೇಶ್ ಯಾದವ್, ಭುವನೇಶ್ವರ ಕುಮಾರ್, ಜಸ್ಪ್ರಿತ್ ಬುಮ್ರಾ ಹಾಗೂ ಇಶಾಂತ್ ಶರ್ಮಾ ಸ್ಥಾನ ಪಡೆದಿದ್ದಾರೆ.
ಶ್ರೀಲಂಕಾ ವಿರುದ್ಧದ ಮೂರು ಟಿ20 ಪಂದ್ಯಗಳ ಸರಣಿ ಡಿಸೆಂಬರ್ 20ರಂದು ಕಟಕ್ ನಲ್ಲಿ ಆರಂಭವಾಗಲಿದ್ದು, ಡಿಸೆಂಬರ್ 22 ಇಂದೋರ್ ನಲ್ಲಿ ಎರಡನೇ ಟಿ20 ಹಾಗೂ ಡಿಸೆಂಬರ್ 24ರಂದು ಮುಂಬೈನಲ್ಲಿ ಮೂರನೇ ಟಿ20 ಪಂದ್ಯ ನಡೆಯಲಿದೆ.
ದಕ್ಷಿಣ ಆಫ್ರಿಕಾ ಹಾಗೂ ಭಾರತ 3 ಟೆಸ್ಟ್, 6 ಏಕದಿನ ಹಾಗೂ 3 ಟಿ20 ಪಂದ್ಯಗಳನ್ನು ಆಡಲಿವೆ. ಡಿಸೆಂಬರ್ 24ರಂದು ಶ್ರೀಲಂಕಾ ವಿರುದ್ಧದ ಸರಣಿ ಮುಗಿಯಲಿದ್ದು, ಡಿಸೆಂಬರ್ 27ರಂದು ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಳ್ಳಲಿದೆ.
ಜನವರಿ5ರಿಂದ ಕೇಪ್ ಟೌನ್ ನಲ್ಲಿ ಪ್ರಾರಂಭವಾಗುವ ಮೂರು ಟೆಸ್ಟ್ ಪಂದ್ಯಗಳ ಸರಣಿ ಫೆಬ್ರವರಿ 24ಕ್ಕೆ ಮುಕ್ತಾಯವಾಗಲಿದೆ.