ಟೀಂ ಇಂಡಿಯಾ 
ಕ್ರಿಕೆಟ್

ಕೊಹ್ಲಿ ನಾಯಕತ್ವದಲ್ಲಿ ಇನ್ನೊಂದು ವಿಶ್ವದಾಖಲೆ: ಸತತ 9 ಸರಣಿ ಗೆದ್ದ ಭಾರತ

ನಾಯಕ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಭಾರತ ಮತ್ತೊಂದು ವಿಶ್ವದಾಖಲೆಯನ್ನು ಮಾಡಿದೆ...

ನವದೆಹಲಿ: ನಾಯಕ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಭಾರತ ಮತ್ತೊಂದು ವಿಶ್ವದಾಖಲೆಯನ್ನು ಮಾಡಿದೆ. 
ಪ್ರವಾಸಿ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯನ್ನು ಗೆಲ್ಲುವ ಮೂಲಕ ಸತತ 9 ಸರಣಿ ಗೆದ್ದ ದಾಖಲೆಯನ್ನು ಮಾಡಿದ್ದು ಆ ಮೂಲಕ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ತಂಡಗಳ ದಾಖಲೆಯನ್ನು ಸರಿಗಟ್ಟಿದೆ.
2005ರಿಂದ 2008ರವರೆಗೆ ಸತತ 9 ಸರಣಿ ಗೆಲುವು ಕಂಡಿದ್ದ ಆಸ್ಟ್ರೇಲಿಯಾ ತಂಡದ ಹೆಸರಿನಲ್ಲಿರುವ ದಾಖಲೆಯನ್ನು ಟೀಂ ಇಂಡಿಯಾ ಸರಿಗಟ್ಟಿದೆ. ಇನ್ನು ಜನವರಿಯಲ್ಲಿ ಬಲಿಷ್ಠ ದಕ್ಷಿಣ ಆಫ್ರಿಕಾ ವಿರುದ್ಧದ ಟೀಂ ಇಂಡಿಯಾ ಟೆಸ್ಟ್ ಸರಣಿಯನ್ನು ಗೆದ್ದರೆ ಸತತ 10ನೇ ಸರಣಿ ಗೆಲುವು ದಾಖಲಿಸುವ ಮೂಲಕ ಹೊಸ ವಿಶ್ವದಾಖಲೆ ಬರೆಯಬಹುದು. 
ಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ನಾಗ್ಪುರದಲ್ಲಿ ನಡೆದಿದ್ದು ಈ ಪಂದ್ಯದಲ್ಲಿ ಟೀಂ ಇಂಡಿಯಾ ಭರ್ಜರಿ ಜಯ ಗಳಿಸಿತ್ತು.  ಆ ನಂತರ ಕೊಲ್ಕತ್ತಾ ಹಾಗೂ ನವದೆಹಲಿಯಲ್ಲಿ ನಡೆದಿದ್ದ ಎರಡು ಟೆಸ್ಟ್ ಪಂದ್ಯಗಳು ಡ್ರಾನಲ್ಲಿ ಅಂತ್ಯವಾಗಿದ್ದವು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

'ವಿರಾಟ್ ಕೊಹ್ಲಿ ಬೇಗ ಔಟಾದರೆ ನನಗೆ ಊಟವೇ ಸೇರಲ್ಲ': ಸ್ಟಾರ್ ಬ್ಯಾಟರ್ ಬಗ್ಗೆ ನಾನಾ ಪಾಟೇಕರ್ ಹೇಳಿಕೆಯ ಹಳೆಯ ವಿಡಿಯೋ ವೈರಲ್

ಬೆಂಗಳೂರಿನಲ್ಲಿ CJP ಪ್ರತಿಭಟನೆ: ಪ್ರಕಾಶ್ ರಾಜ್, YouTuber ಧ್ರುವ್ ರಾಠಿ ಭಾಗಿ; CEC ರಾಜೀನಾಮೆಗೆ ಬಿಗಿಪಟ್ಟು..!

ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

'KSRTCಯಲ್ಲಿ ಡೀಸೆಲ್ ಕೊರತೆ ತಾತ್ಕಾಲಿಕ'; ಹಣದ ಕೊರತೆ ಇದ್ದಿದ್ದರೆ, ಗ್ಯಾರಂಟಿ ಯೋಜನೆಗಳು ಮುಂದುವರಿಯುತ್ತಿದ್ದವೇ?': ಜಿ ಪರಮೇಶ್ವರ