ಯುವರಾಜ್ ಸಿಂಗ್ 
ಕ್ರಿಕೆಟ್

ಯೋ ಯೋ ಪರೀಕ್ಷೆಯಲ್ಲಿ ಯುವರಾಜ್ ಸಿಂಗ್ ಪಾಸ್: ತಂಡಕ್ಕೆ ಮರಳುವ ವಿಶ್ವಾಸ

ಫಿಟ್ ನೆಸ್ ಸಮಸ್ಯೆ ಹಾಗೂ ಕಳಪೆ ಫಾರ್ಮ್ ನಿಂದ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯಲು ವಿಫಲರಾಗುತ್ತಿರುವ ಸ್ಫೋಟಕ ಬ್ಯಾಟ್ಸ್ ಮನ್ ಯುವರಾಜ್ ಸಿಂಗ್ ಕೊನೆಗೂ...

ನವದೆಹಲಿ: ಫಿಟ್ ನೆಸ್ ಸಮಸ್ಯೆ ಹಾಗೂ ಕಳಪೆ ಫಾರ್ಮ್ ನಿಂದ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯಲು ವಿಫಲರಾಗುತ್ತಿರುವ ಸ್ಫೋಟಕ ಬ್ಯಾಟ್ಸ್ ಮನ್ ಯುವರಾಜ್ ಸಿಂಗ್ ಕೊನೆಗೂ ಯೋ ಯೋ ಪರೀಕ್ಷೆಯಲ್ಲಿ ಪಾಸ್ ಆಗಿದ್ದು ತಂಡಕ್ಕೆ ಮರಳುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 
ಯೋ ಯೋ ಎಂಡ್ಯುರೆನ್ಸ್ ಪರೀಕ್ಷೆಯಲ್ಲಿ 35 ವರ್ಷದ ಯುವರಾಜ್ ಸಿಂಗ್ ಪಾಸ್ ಆಗಿದ್ದಾರೆ. ಈ ಹಿಂದೆ ಮೂರು ಬಾರಿ ಯೋ ಯೋ ಪರೀಕ್ಷೆಗೆ ಒಳಪಟ್ಟಿದ್ದ ಯುವಿ ಹೆಚ್ಚಿನ ಅಂಕ ಪಡೆಯುವಲ್ಲಿ ವಿಫಲರಾಗಿದ್ದರು. 
ಇನ್ನು 2019ರ ವಿಶ್ವಕಪ್ ವರೆಗೂ ಟೀಂ ಇಂಡಿಯಾಗೆ ಮರಳಲು ಪ್ರಯತ್ನಿಸುತ್ತೇನೆ ಸೋಲನ್ನು ಒಪ್ಪಿಕೊಳ್ಳುವುದಿಲ್ಲ. ನಾನು ಸೋಲಿಗೆ ಬೆದರುವುದಿಲ್ಲ, ವೃತ್ತಿ ಜೀವನದಲ್ಲಿ ಏರಿಳಿತಗಳು ಇದ್ದೇ ಇರುತ್ತದೆ. ನಾನು ಸೋಲನ್ನು ಕಂಡಿದ್ದೇನೆ. ಸೋಲೇ ಗೆಲುವಿನ ಮೆಟ್ಟಿಲು ಎಂದು ಯುವರಾಜ್ ಸಿಂಗ್ ತಿಳಿಸಿದ್ದಾರೆ. 
ಇತ್ತೀಚಿನ ದಿನಗಳಲ್ಲಿ ನಾನು ಫಾರ್ಮ್ ನಲ್ಲಿ ಇಲ್ಲ. ಆದರೂ ನನ್ನ ಮೇಲೆ ನನಗೆ ನಂಬಿಕೆಯಿದೆ. ಆದರೆ ಎಷ್ಟು ಜನರು ನನ್ನ ಮೇಲೆ ನಂಬಿಕೆ ಇಟ್ಟಿದ್ದಾರೆ ಎಂಬುದು ಗೊತ್ತಿಲ್ಲ ಎಂದು ಯುವಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಅಮೆರಿಕಾ–ಇರಾನ್ ಶಾಂತಿ ಮಾತುಕತೆ ವಿಫಲ: ಷೇರು ಮಾರುಕಟ್ಟೆ ಮೇಲೆ ಪರಿಣಾಮ; ಸೆನ್ಸೆಕ್ಸ್ 1600 ಅಂಕ ಕುಸಿತ, ತೈಲ ಬೆಲೆ ಏರಿಕೆ..!

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ನೀವು ಪೋಪ್ ಆಗಲು ನಾನು ಕಾರಣ, ರಾಜಕಾರಣ ಬಿಟ್ಟು ಧರ್ಮಗುರುವಿನ ಕೆಲಸ ಮಾಡಿ: ಪೋಪ್ ಲಿಯೋ XIV ವಿರುದ್ಧ ಟ್ರಂಪ್ ವಾಗ್ದಾಳಿ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಕೆಲವು ಸಚಿವರು ಕೈಗೂ ಸಿಗಲ್ಲ, ಫೋನಿಗೂ ಸಿಗಲ್ಲ: ದೇವಲೋಕದಿಂದ ಬಂದಂತೆ ಆಡ್ತಾರೆ; ಅಂತವರನ್ನು ಬದಲಾಯಿಸಿ ಹೊಸಬರಿಗೆ ಅವಕಾಶ ನೀಡಿ'

SCROLL FOR NEXT