ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ
ಚೆನ್ನೈ: ಸದ್ಯ ಟೀಂ ಇಂಡಿಯಾದಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಹಾರ್ದಿಕ್ ಪಾಂಡ್ಯ ಮತ್ತು ರೋಹಿತ್ ಶರ್ಮಾ ಮಧ್ಯೆ ದಕ್ಷಿಣ ಆಫ್ರಿಕಾ ಪ್ರವಾಸ ಸಂಬಂಧ ಪೈಪೋಟಿ ಎದುರಾಗಿದೆ.
ಟೀಂ ಇಂಡಿಯಾದ ಬ್ಯಾಟಿಂಗ್ ಕ್ರಮಾಂಕ ನಂಬರ್ 6ನೇ ಸ್ಥಾನಕ್ಕಾಗಿ ಹಾರ್ದಿಕ್ ಪಾಂಡ್ಯ ಮತ್ತು ರೋಹಿತ್ ಶರ್ಮಾ ಮಧ್ಯೆ ನಿಕಟ ಸ್ಪರ್ಧೆ ಏರ್ಪಟ್ಟಿದೆ. ಇನ್ನು ಅಗ್ರ ಕ್ರಮಾಂಕದಲ್ಲಿ ಶಿಖರ್ ಧವನ್, ಮುರಳಿ ವಿಜಯ್ ಮತ್ತು ಕೆಎಲ್ ರಾಹುಲ್ ನಡುವೆ ನಿಕಟ ಪೈಪೋಟಿ ಕಂಡುಬರಲಿದೆ.
ನಂತರದ ಸ್ಥಾನಗಳನ್ನು ಚೇತೇಶ್ವರ ಪೂಜಾರ, ನಾಯಕ ವಿರಾಟ್ ಕೊಹ್ಲಿ ಮತ್ತು ಅಜಿಂಕ್ಯ ರಹಾನೆ ತುಂಬಲಿದ್ದಾರೆ. ಇತ್ತೀಚೆಗಿನ ಸರಣಿಗಳಲ್ಲಿ ಅಜಿಂಕ್ಯ ರಹಾನೆ ಕಳಪೆ ಪ್ರದರ್ಶನ ನೀಡುತ್ತಿದ್ದರೂ ವಿದೇಶದಲ್ಲಿನ ನಿರ್ವಹಣೆ ಅವರನ್ನು ತಂಡದಲ್ಲಿ ಉಳಿಸಿಕೊಳ್ಳುವಂತೆ ಮಾಡಿದೆ.
ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿಯಲ್ಲಿ ಭರ್ಜರಿ ಕಮ್ ಬ್ಯಾಕ್ ಮಾಡಿರುವ ರೋಹಿತ್ ಶರ್ಮಾ ಸತತ ಎರಡು ಶತಕ ಹಾಗೂ ಅರ್ಧಶತಕ ಸಿಡಿಸಿದ್ದರು. ಇನ್ನು ಲಂಕಾ ಸರಣಿಯಿಂದ ವಿಶ್ರಾಂತಿ ಪಡೆದು ತಂಡದಿಂದ ಹೊರಗುಳಿದಿರುವ ಪಾಂಡ್ಯ ನಾಯಕ ಕೊಹ್ಲಿಗೆ ಹೆಚ್ಚಿನ ಬೌಲಿಂಗ್ ಆಯ್ಕೆಯನ್ನು ನೀಡುವುದರಲ್ಲಿ ಸಂಶಯವಿಲ್ಲ.
ಇನ್ನು ಬೌಲಿಂಗ್ ವಿಭಾಗದಲ್ಲೂ ಇಶಾಂತ್ ಶರ್ಮಾ, ಉಮೇಶ್ ಯಾದವ್, ಭುವನೇಶ್ವರ್ ಕುಮಾರ್, ಮೊಹಮ್ಮದ್ ಶಮಿ ಹಾಗೂ ಜಸ್ ಪ್ರೀತ್ ಬುಮ್ರಾ ನಡುವೆ ಪೈಪೋಟಿ ಕಂಡುಬರಲಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos